Maratha Reservation: ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯದ ಮೀಸಲಾತಿಗೆ ಸಮ್ಮತಿ: ಏಕನಾಥ್ ಶಿಂಧೆ
ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ(Reservation) ನೀಡಲು ಎಲ್ಲರ ಒಪ್ಪಿಗೆ ದೊರೆತಿದೆ, ಸರ್ಕಾರವು ಕೂಡ ಮೀಸಲಾತಿಯ ಪರವಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಹೇಳಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿಗೆ ಎಲ್ಲಾ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಂಬೈನಲ್ಲಿ ಸಭೆ ಬಳಿಕ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ(Reservation) ನೀಡಲು ಎಲ್ಲರ ಒಪ್ಪಿಗೆ ದೊರೆತಿದೆ, ಸರ್ಕಾರವು ಕೂಡ ಮೀಸಲಾತಿಯ ಪರವಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಹೇಳಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿಗೆ ಎಲ್ಲಾ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಂಬೈನಲ್ಲಿ ಸಭೆ ಬಳಿಕ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಮೀಸಲಾತಿ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿರುವುದು ಒಳ್ಳೆಯದಲ್ಲ, ಮೀಸಲಾತಿ ಸಂಬಂಧ 2 ಹಂತದಲ್ಲಿ ಕಾನೂನು ಪ್ರಕ್ರಿಯೆ ಚಾಲ್ತಿಯಲ್ಲಿದೆ, ಕಾನೂನು ಪ್ರಕ್ರಿಯೆ ಬಳಿಕ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲಾಗುವುದು ಎಂದು ಶಿಂಧೆ ಮಾಹಿತಿ ನೀಡಿದ್ದಾರೆ.
ಮರಾಠ ಮೀಸಲಾತಿಗೆ ಆಗ್ರಹಿಸಿ ನಾಂದೇಡ್-ನೈಗಾಂವ್ ರಸ್ತೆಯಲ್ಲಿ ರಸ್ತೆ ತಡೆ ಪ್ರತಿಭಟನೆ ಆರಂಭವಾಯಿತು. ಅಷ್ಟರಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬೆಂಗಾವಲು ಪಡೆಯೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಇಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಈ ಅವಧಿಯಲ್ಲಿ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಮತ್ತಷ್ಟು ಓದಿ: ಮಹಾರಾಷ್ಟ್ರ: ಮರಾಠ ಮೀಸಲಾತಿ ಆಂದೋಲನದ ನಡುವೆಯೇ ಸರ್ವಪಕ್ಷ ಸಭೆ ಕರೆದ ಸಿಎಂ ಏಕನಾಥ್ ಶಿಂಧೆ
ಮುಂದಿನ ಆದೇಶದವರೆಗೆ ಜಿಲ್ಲೆಯಲ್ಲಿ ಉಪವಾಸ, ಆಂದೋಲನ, ಧರಣಿ, ಮೆರವಣಿಗೆ, ರ್ಯಾಲಿಗಳನ್ನು ನಿಷೇಧಿಸಲಾಗಿದೆ. ನಾಂದೇಡ್ ಜಿಲ್ಲೆಯಲ್ಲಿ ಮರಾಠ ಚಳವಳಿ ಹಿಂಸಾಚಾರಕ್ಕೆ ತಿರುಗಿದೆ. ಜಿಲ್ಲೆಯ ಕೃಷ್ಣನೂರಿನಲ್ಲಿ ಮರಾಠಾ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ನಾಂದೇಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕೊಕಾಟೆ ಗಾಯಗೊಂಡಿದ್ದಾರೆ.
ಜಲ್ನಾದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಮರಾಠವಾಡ ಪ್ರದೇಶದಲ್ಲಿನ ಹಿಂಸಾತ್ಮಕ ಘಟನೆಗಳ ದೃಷ್ಟಿಯಿಂದ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವದಂತಿಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿಗಳು ಹಿಂಸಾಚಾರದಲ್ಲಿ ಪಾಲ್ಗೊಳ್ಳದಂತೆ ಜನರಿಗೆ ಮನವಿ ಮಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ಹದಗೆಡಿಸುವ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ರಾಜಕೀಯ ಪಕ್ಷಗಳನ್ನು ಕೇಳಿದ್ದಾರೆ.
ಸಿಎಂ ನಿವಾಸಕ್ಕೆ ಹೆಚ್ಚಿನ ಭದ್ರತೆ ಸಿಎಂ ಶಿಂಧೆ ಮಂಗಳವಾರ ಸಚಿವ ಸಂಪುಟ ಹಾಗೂ ಪಕ್ಷದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ಹಿಂಸಾಚಾರದ ಹಿನ್ನೆಲೆಯಲ್ಲಿ ಸಚಿವಾಲಯ, ಸಿಎಂ ಶಿಂಧೆ ಮತ್ತು ಸಚಿವರ ನಿವಾಸಕ್ಕೆ ಭದ್ರತೆ ಹೆಚ್ಚಿಸಿದೆ, ವಾಸ್ತವವಾಗಿ, ಪ್ರತಿಭಟನಾಕಾರರು ಮೂವರು ಶಾಸಕರ ನಿವಾಸ ಮತ್ತು ಕಚೇರಿಗೆ ಬೆಂಕಿ ಹಚ್ಚಿದ್ದರು.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸರ್ವಪಕ್ಷ ಸಭೆ ಕರೆದಿದ್ದರು, ಬೆಳಗ್ಗೆ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ಪಕ್ಷಗಳು ಸೇರಿ ಈ ನಿರ್ಧಾರಕ್ಕೆ ಬರಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ