ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆಯಾಗಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ
ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಮಾರ್ಗರೇಟ್ ಆಳ್ವಾ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 17, 2022 | 8:38 PM

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ (Vice President Election) ಯುಪಿಎ (UPA) ಅಭ್ಯರ್ಥಿಯಾಗಿ ಕರ್ನಾಟಕದ (Karnataka)  ಮಾರ್ಗರೇಟ್ ಆಳ್ವ (Margaret Alva) ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ವಿಪಕ್ಷಗಳ ಸಭೆ ಬಳಿಕ ಶರದ್ ಪವಾರ್ ಮಾರ್ಗರೇಟ್ ಆಳ್ವ ಅವರ ಹೆಸರು ಘೋಷಿಸಿದ್ದಾರೆ. ರಾಜಸ್ಥಾನ, ಗೋವಾ, ಗುಜರಾತ್ ಮತ್ತು ಉತ್ತರಾಖಂಡ್​​ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ನನ್ನ ಆಯ್ಕೆ ಹೆಮ್ಮೆ ಮತ್ತು ಗೌರವ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲಾ ವಿಪಕ್ಷ ನಾಯಕರಿಗೆ ವಂದನೆಗಳು ಎಂದು ಮಾರ್ಗರೆಟ್ ಆಳ್ವ ಟ್ವಿಟ್​​ ಮಾಡಿದ್ದಾರೆ

ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ  ಅಭ್ಯರ್ಥಿಯಾಗಿ ವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರನ್ನು ಆಯ್ಕೆ ಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಪ್ರಸ್ತುತ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್​ ಧನ್ಖರ್ ಅವರ ಹೆಸರನ್ನು ಪ್ರಕಟಿಸಿದರು.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಭೇಟಿಯಾಗಿ ಸಭೆ ನಡೆಸಿದರು.

ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನ್ಖರ್‌ ಅವರಿಗೆ YSRCP ಬೆಂಬಲ ನೀಡುತ್ತದೆ ಎಂದು  ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ಮೋಹನ್ ರೆಡ್ಡಿ​​​ ಹೇಳಿದ್ದಾರೆ. ಹಾಗೇ ಬಿಜು ಜನತಾದಳ ಮತ್ತು  ಎಐಎಡಿಎಂಕೆ ಕೂಡ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

Published On - 4:59 pm, Sun, 17 July 22