Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಯರಿಂದ ಕಾನೂನು ದುರುಪಯೋಗ; ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಬಳಿಕ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

ಬೆಂಗಳೂರು ಇಂಜಿನಿಯರ್​ ಅತುಲ್ ಸುಭಾಷ್​ ಆತ್ಮಹತ್ಯೆ ಇದೀಗ ಎಲ್ಲೆಡೆ ಸುದ್ದಿಯಾಗಿದೆ. ಬೆಂಗಳೂರು ಟೆಕ್ಕಿ ಆತ್ಮಹತ್ಯೆಗೆ ಶರಣಾದ ನಂತರ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದ್ದು, ವಿವಾಹಿತ ಮಹಿಳೆಯರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮಹಿಳೆಯರನ್ನು ತಮ್ಮ ಕುಟುಂಬದ ಕ್ರೌರ್ಯದಿಂದ ರಕ್ಷಿಸುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ವಿವಾಹಿತ ಮಹಿಳೆಯರಿಂದ ಕಾನೂನು ದುರುಪಯೋಗ; ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಬಳಿಕ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ
ಸುಪ್ರೀಂ ಕೋರ್ಟ್
Follow us
ಸುಷ್ಮಾ ಚಕ್ರೆ
| Updated By: Digi Tech Desk

Updated on:Dec 12, 2024 | 10:37 AM

ನವದೆಹಲಿ: ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ಕಾನೂನನ್ನು ವ್ಯಾಪಕವಾಗಿ ಬಳಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. 34 ವರ್ಷದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್‌ಗೆ ನ್ಯಾಯಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಗಳ ಮಧ್ಯೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಹಣ ವಸೂಲಿ ಮಾಡಲು ತನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದ ಅತುಲ್ ಸುಭಾಷ್ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳವನ್ನು ಸೂಸೈಡ್​ ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಹಿಳೆಯರನ್ನು ತಮ್ಮ ಕುಟುಂಬದ ಕ್ರೌರ್ಯದಿಂದ ರಕ್ಷಿಸುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಮಾಯಕರ ಮೇಲೆ ಅನಗತ್ಯ ಕಿರುಕುಳವನ್ನು ತಡೆಯಲು ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಿರ್ಧರಿಸುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮದುವೆಯಲ್ಲಿ ಶೇ. 99ರಷ್ಟು ಪುರುಷರದೇ ತಪ್ಪಿರುತ್ತೆ; ಬೆಂಗಳೂರು ಟೆಕ್ಕಿ ಅತುಲ್ ಆತ್ಮಹತ್ಯೆ ಬಗ್ಗೆ ಕಂಗನಾ ರಣಾವತ್ ಪ್ರತಿಕ್ರಿಯೆ

ಆತ್ಮಹತ್ಯೆಗೆ ಮುನ್ನ, ಅತುಲ್ ಸುಭಾಷ್ ಅವರು 80 ನಿಮಿಷಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು. ಅದರಲ್ಲಿ ಅವರು ತಮ್ಮ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಅವರ ಕುಟುಂಬ ಹಣವನ್ನು ಸುಲಿಗೆ ಮಾಡಲು ತನ್ನ ಮತ್ತು ತನ್ನ ಕುಟುಂಬದ ಮೇಲೆ ಅನೇಕ ಪ್ರಕರಣಗಳನ್ನು ಹಾಕಿದ್ದಾರೆ ಎಂದು ಆರೋಪಿಸಿದ್ದರು. ಇದಲ್ಲದೆ ಅತುಲ್ ತಮ್ಮ 24 ಪುಟಗಳ ಆತ್ಮಹತ್ಯೆ ಪತ್ರದಲ್ಲಿ ನ್ಯಾಯ ವ್ಯವಸ್ಥೆಯನ್ನು ಟೀಕಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಿಂದ ಜೌನ್​ಪುರಕ್ಕೆ 40 ಬಾರಿ ಹೋಗಿದ್ದ ಅತುಲ್, ಬೆಂಗಳೂರು ಟೆಕ್ಕಿ ಸಾವಿನ ಬಳಿಕ ಪೋಷಕರು ಹೇಳಿದ್ದೇನು?

ಇದಕ್ಕೂ ಮುನ್ನ ದೆಹಲಿ ಮೂಲದ ಹಿರಿಯ ವಕೀಲ ವಿಕಾಸ್ ಪಹ್ವಾ ಅವರು ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣದ ಕುರಿತು ಮಾತನಾಡಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯನ್ನು ಉಲ್ಲೇಖಿಸಿ, ನಮ್ಮ ಸಾಮಾಜಿಕ ರಚನೆಯ ಮೇಲೆ ಪರಿಣಾಮ ಬೀರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದರು.

ಸೆಕ್ಷನ್ 498 ಎ ದುರುಪಯೋಗವಾಗುತ್ತಿದೆ ಮತ್ತು ಹಣ ಸುಲಿಗೆ ಮಾಡುವ ಸಾಧನವಾಗಿ ಮಾರ್ಪಟ್ಟಿದೆ ಎಂದು ಹಿರಿಯ ವಕೀಲರು ಆರೋಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Wed, 11 December 24

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!