ಲಖನೌ: ಉತ್ತರ ಪ್ರದೇಶದ (Uttar Pradesh) ಹಾಪುರ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ (Factory) ಶನಿವಾರ (ಮೇ 4) ರಂದು ಸಂಭವಿಸಿದ ಸ್ಪೋಟದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸರೆಯಾಗಿವೆ. ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಧೋಲಾನಾದಲ್ಲಿನ ಯುಪಿಎಸ್‌ಐಡಿಸಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಕಾರ್ಖಾನೆಯಲ್ಲಿ ಸುಮಾರು 30 ಜನರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಕಾನ್ಪುರ್ ಹಿಂಸಾಚಾರ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಸ್ಫೋಟದ ಪ್ರಭಾವ ಎಷ್ಟು ತೀವ್ರವಾಗಿದೆ ಎಂದರೆ ಸುತ್ತಮುತ್ತಲಿನ ಕೆಲವು ಕಾರ್ಖಾನೆಗಳ ಮೇಲ್ಛಾವಣಿಗಳು ಹಾನಿಗೊಳಗಾಗಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಮೂರು ಗಂಟೆ ಕಾಲ ಸಮಯ ತೆಗದುಕೊಂಡರು. ಅವಘಡ ಸಂಭವಿಸಿದ ಕಾರ್ಖನೆಗೆ ಇಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಗೆ ಪರವಾನಿಗೆ ನೀಡಲಾಗಿತ್ತು, ಆದರೆ ಪಟಾಕಿಗಳನ್ನು ತಯಾರಿಸುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಾರ್ಖಾನೆಯ ಮಾಲೀಕರ ವಿರುದ್ಧ ದೂರುದಾಖಲಾಗಿದೆ.
CCTV visuals of blast at a chemical factory in UP's Hapur. 13 people have died while at least 15 with burn injuries in varying degrees are being treated at hospitals in Delhi and Meerut. Police trying to apprehend factory owner Dilshad, a resident of Delhi. pic.twitter.com/8BjZszcuGa
— Piyush Rai (@Benarasiyaa) June 5, 2022
ಇದನ್ನು ಓದಿ: ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಬಿಜೆಪಿಯಿಂದ ನೂಪುರ್ ಶರ್ಮಾ, ನವೀನ್ ಜಿಂದಾಲ್ ಅಮಾನತು
ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramnath Kovind), ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adhitynath) ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಕುರಿತು ತಜ್ಞರಿಂದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಲಕ್ನೋದಲ್ಲಿ ನೀಡಿದ ಹೇಳಿಕೆಯಲ್ಲಿ, ಆದಿತ್ಯನಾಥ್ ಅವರು ಸಾವನ್ನಪ್ಪಿದ ಮತ್ತು ಗಾಯಗೊಂಡವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 7:52 pm, Sun, 5 June 22