West Bengal: ಭಾರಿ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಅಂಗಡಿಗಳು ನಾಶ

ಭಾರಿ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣ ನಾಶವಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಮಾರ್ಕೆಟ್​ನಲ್ಲಿ ನಡೆದಿದೆ.

West Bengal: ಭಾರಿ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಅಂಗಡಿಗಳು ನಾಶ
ಹೌರಾ ಮಾರುಕಟ್ಟೆಯಲ್ಲಿ ಅಘ್ನಿ ಅವಘಡ

Updated on: Jul 21, 2023 | 8:14 AM

ಕೊಲ್ಕತ್ತಾ: ಭಾರಿ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಅಂಗಡಿಗಳು (Shops) ಸಂಪೂರ್ಣ ನಾಶವಾಗಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಹೌರಾ ಮಾರ್ಕೆಟ್​ನಲ್ಲಿ (Howrah Market) ನಡೆದಿದೆ. ಹೌರಾ ಮಾರ್ಕೆಟ್​ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಮೌಲ್ಯದ ಆಹಾರ ಪದಾರ್ಥ, ಇತರೆ ವಸ್ತುಗಳು ಸುಟ್ಟು ಭಸ್ಮವಾಗಿವೆ. 18 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನದಿಸುವ ಕಾರ್ಯ ನಡೆಯುತ್ತಿದೆ.

ಘಟನೆ ಕುರಿತು ಮಾತನಾಡಿದ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಘೋಷ್, “ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದ ತಕ್ಷಣ, ತಕ್ಷಣ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ನಮ್ಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದರು. ಬೆಂಕಿಯಿಂದ ನೂರಾರು ಅಂಗಡಿಗಳಿಗೆ ಹಾನಿಯಾಗಿವೆ ಎಂದು ಸ್ಥಳೀಯ ಅಂಗಡಿಕಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ ಜೈಪುರ​​ ಸುತ್ತಮುತ್ತ ಸರಣಿ ಭೂಕಂಪ

ಇನ್ನು ಇದೇ ವರ್ಷ ಏಪ್ರಿಲ್‌ನಲ್ಲಿ ಉಲುಬೇರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೌರಾ ಪ್ರದೇಶದ  ಲುಡೋ ಬಜಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅನಾಹುತದಲ್ಲಿ 100 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟಯ ಭಸ್ಮವಾಗಿದ್ದವು. ನಾಲ್ಕು ಗಂಟೆಗಳ ಹೋರಾಟದ ನಂತರ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳ ಸಿಬ್ಬಂದಿ   ಯಶಸ್ವಿಯಾದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 am, Fri, 21 July 23