ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ(Fire Accident) ಸಂಭವಿಸಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.
VIDEO | Fire breaks out in Ayyappa Shopping Mall, Kamareddy in Telangana. Fire tenders on the spot. More details are awaited. pic.twitter.com/al11aF0Ng4
— Press Trust of India (@PTI_News) December 14, 2023
ಈ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ, ಈ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ