Breaking ಮಧ್ಯಪ್ರದೇಶದ ಜಬಲಪುರ್​ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಜೀವ ದಹನ

ಜಬಲಪುರ್​ನ ನ್ಯೂ ಲೈಫ್ ಆಸ್ಪತ್ರೆಯಲ್ಲಿಸಂಭವಿಸಿದ ಈ ಅವಘಡದಲ್ಲಿ ಹಲವರಿಗೆ ಗಾಯಗಳಾಗಿದ್ದು, ಕೆಲವರ ಪರಿಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು

Breaking ಮಧ್ಯಪ್ರದೇಶದ ಜಬಲಪುರ್​ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಜೀವ ದಹನ
ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಬೆಂಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 01, 2022 | 5:58 PM

ಮಧ್ಯಪ್ರದೇಶದ (Madhya Pradesh) ಜಬಲಪುರ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 8 ಜನರು ಸಜೀವದಹನವಾಗಿದ್ದಾರೆ. ಜಬಲಪುರ್​ನ ನ್ಯೂ ಲೈಫ್ ಆಸ್ಪತ್ರೆಯಲ್ಲಿಸಂಭವಿಸಿದ ಈ ಅವಘಡದಲ್ಲಿ ಹಲವರಿಗೆ ಗಾಯಗಳಾಗಿದ್ದು, ಕೆಲವರ ಪರಿಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳೀಯರ ಪ್ರಕಾರ ಅಗ್ನಿಶಾಮಕ ದಳದ ಹಲವಾರು ವಾಹನಗಳು  ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಅಗ್ನಿ ದುರಂತದಲ್ಲಿ ಸಾವಿಗೀಡಾದ ವ್ಯಕ್ತಿಯ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ. ಜಬಲ್ ಪುರದ ಶಿವ ನಗರ್ ದಮೋಹ್ ನಾಕಾ ಬಳಿ ಇರುವ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಾಗ ಕಾಲ್ತುಳಿತದಂಥಾ ಪರಿಸ್ಥಿತಿ ಎದುರಾಗಿತ್ತು ಎಂದು ಮೂಲಗಳು ಹೇಳಿವೆ.

Published On - 4:30 pm, Mon, 1 August 22