ಮಹಾರಾಷ್ಟ್ರ: ನಾಸಿಕ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ; ಯಾವುದೇ ಪ್ರಾಣಹಾನಿ ಇಲ್ಲ

ಸಿನ್ನಾರ್‌ನ ಎಂಐಡಿಸಿ ಪ್ರದೇಶದಲ್ಲಿರುವ ಆದಿಮಾ ಆರ್ಗ್ಯಾನಿಕ್ ಎಂಬ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಹತ್ತಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದವು. ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ನಾಸಿಕ್ ಫೆಬ್ರುವರಿ 02: ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯ ಕಂಪನಿಯೊಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಘಟನೆಯಲ್ಲಿ ಹಲವು ಸ್ಫೋಟಗಳು ಸಂಭವಿಸಿರುವ ಬಗ್ಗೆಯೂ ವರದಿಯಾಗಿದೆ. ಹಲವಾರು ಕಿಲೋಮೀಟರ್ ದೂರದಿಂದ ಬೆಂಕಿ ಮತ್ತು ಹೊಗೆಯ ಮೋಡಗಳು ಸಹ ಗೋಚರಿಸಿದವು. ವರದಿಗಳ ಪ್ರಕಾರ, ಸಿನ್ನಾರ್‌ನ ಎಂಐಡಿಸಿ ಪ್ರದೇಶದಲ್ಲಿರುವ ಆದಿಮಾ ಆರ್ಗ್ಯಾನಿಕ್ ಎಂಬ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಹತ್ತಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದವು. ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆಂಕಿ ನಂದಿಸಲು ಪ್ರಯತ್ನಗಳು ನಡೆಯುತ್ತಿದ್ದರೂ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಗ್ನಿಶಾಮಕ ದಳ, ಬೆಂಕಿ ನಿಯಂತ್ರಣಕ್ಕೆ ಬಂದ ನಂತರ ಕೂಲಿಂಗ್ ಕಾರ್ಯಾಚರಣೆ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ

ಕೆಲವು ಮಾಧ್ಯಮ ವರದಿಗಳ ಪ್ರಕಾರ, ಮುಸಲ್ಗಾಂವ್ ಸಿನ್ನಾರ್ ಎಕ್ಸ್‌ಪ್ರೆಸ್‌ವೇಯಲ್ಲಿರುವ ಆದಿಮಾ ಆರ್ಗಾನಿಕ್ಸ್ ಕಾರ್ಖಾನೆಯಲ್ಲಿ ಸಂಜೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕು, ಮರಾಠರಿಗೆ ಮೀಸಲಾತಿ ನೀಡಬೇಕು: ಮನೋಜ ಜಾರಂಗೆ

ಘಟನೆಯ ಸಂದರ್ಭದಲ್ಲಿ 20 ರಿಂದ 25 ರ ಒಟ್ಟು ಸಿಬ್ಬಂದಿಯ ಸುಮಾರು 10 ರಿಂದ 12 ನೌಕರರು ಕೆಲಸದಲ್ಲಿ ಹಾಜರಿದ್ದರು. ಐದು ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿ ಬೆಂಕಿಯನ್ನು ನಿಯಂತ್ರಿಸಲು ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Fri, 2 February 24