AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಛತ್ ಪೂಜೆಗೆ ಪ್ರಸಾದ ತಯಾರಿಸುವಾಗ ಬೆಂಕಿ ಅವಘಡ; 30ಕ್ಕೂ ಹೆಚ್ಚು ಮಂದಿಗೆ ಗಾಯ

ಶಹಗಂಜ್ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಮೊದಲು ಅನಿಲ್ ಗೋಸ್ವಾಮಿ ಅವರ ಕುಟುಂಬ ಸದಸ್ಯರು ಛತ್ ಪೂಜೆಗಾಗಿ ಪ್ರಸಾದವನ್ನು ತಯಾರಿಸುತ್ತಿದ್ದಾಗ ಶಾರ್ಟ್​ ಸರ್ಕ್ಯೂಟ್ ಉಂಟಾಗಿ, ಗ್ಯಾಸ್ ಸಿಲಿಂಡರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಬಿಹಾರದಲ್ಲಿ ಛತ್ ಪೂಜೆಗೆ ಪ್ರಸಾದ ತಯಾರಿಸುವಾಗ ಬೆಂಕಿ ಅವಘಡ; 30ಕ್ಕೂ ಹೆಚ್ಚು ಮಂದಿಗೆ ಗಾಯ
ಔರಂಗಾಬಾದ್​​ನಲ್ಲಿ ಬೆಂಕಿ ಅಪಘಾತ
TV9 Web
| Edited By: |

Updated on: Oct 29, 2022 | 11:31 AM

Share

ಔರಂಗಾಬಾದ್: ಬಿಹಾರದ (Bihar) ಔರಂಗಾಬಾದ್ ಜಿಲ್ಲೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಭಾರೀ ಬೆಂಕಿ ಕಾಣಿಸಿಕೊಂಡು, ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 10 ಜನರ ಸ್ಥಿತಿ ಬಹಳ ಗಂಭೀರವಾಗಿದೆ. ಇಂದು ಬೆಳಗಿನ ಜಾವ 2.30ಕ್ಕೆ ಕುಟುಂಬವೊಂದು ಛತ್ ಪೂಜೆಗೆ (Chhath Puja) ಅಡುಗೆ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಬೆಂಕಿ ನಂದಿಸುವ ಪ್ರಯತ್ನದಲ್ಲಿ 7 ಮಂದಿ ಪೊಲೀಸ್ ಸಿಬ್ಬಂದಿಗೂ ಸುಟ್ಟ ಗಾಯಗಳಾಗಿವೆ. ಶಹಗಂಜ್ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಮೊದಲು ಅನಿಲ್ ಗೋಸ್ವಾಮಿ ಅವರ ಕುಟುಂಬ ಸದಸ್ಯರು ಛತ್ ಪೂಜೆಗಾಗಿ ಪ್ರಸಾದವನ್ನು ತಯಾರಿಸುತ್ತಿದ್ದಾಗ ಶಾರ್ಟ್​ ಸರ್ಕ್ಯೂಟ್ ಉಂಟಾಗಿ, ಗ್ಯಾಸ್ ಸಿಲಿಂಡರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗ್ಯಾಸ್ ಸೋರಿಕೆಯಾಯಿತು. ಬಳಿಕ ಆ ಬೆಂಕಿ ಇಡೀ ಮನೆಯನ್ನು ಆವರಿಸಿತು.

ಇದನ್ನೂ ಓದಿ: ಬೆಳಗಾವಿಯ ಕಿತ್ತೂರಿನಲ್ಲಿ ಪಟಾಕಿ ಸಿಡಿತದಿಂದ ಕುಶನ್ ಮತ್ತು ಫರ್ನಿಚರ್ ಅಂಗಡಿಗೆ ಬೆಂಕಿ, ರೂ. 3 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಬೆಂಕಿಯನ್ನು ಆರಿಸಲು ಸ್ಥಳೀಯರು ಎಲ್ಲಾ ಪ್ರಯತ್ನಗಳನ್ನು ಮಾಡಿದರೂ ಬೆಂಕಿ ತೀವ್ರಗೊಂಡಿತು. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಆದರೂ ಬೆಂಕಿಯು ತೀವ್ರಗೊಂಡಿತು. ಸಿಲಿಂಡರ್‌ಗೆ ಪೊಲೀಸರು ನೀರು ಹಾರಿಸಿದ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಔರಂಗಾಬಾದ್ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವರನ್ನು ಖಾಸಗಿ ನರ್ಸಿಂಗ್ ಹೋಂಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು- ದೆಹಲಿ ವಿಮಾನದಲ್ಲಿ ಬೆಂಕಿಯ ವಿಡಿಯೋ ವೈರಲ್; ವರದಿ ಕೇಳಿದ ವಿಮಾನಯಾನ ಸಚಿವಾಲಯ

ಈ ಘಟನೆಯ ಕಾರಣವನ್ನು ಇನ್ನೂ ದೃಢೀಕರಿಸಲಾಗಿಲ್ಲ ಎಂದು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿನಯ್ ಕುಮಾರ್ ಸಿಂಗ್ ಹೇಳಿದ್ದಾರೆ. ಆದರೆ ಅನಿಲ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮನೆ ಮಾಲೀಕ ಅನಿಲ್ ಗೋಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ