AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, ರಜೆಗೆ ಬಂದಿದ್ದ ಮಕ್ಕಳು ಸೇರಿ 17ಮಂದಿ ಸಜೀವ ದಹನ, ಮೋದಿ ಸಂತಾಪ

ಚಾರ್​ಮಿನಾರ್(CharMinar)​ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್  ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.

ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, ರಜೆಗೆ ಬಂದಿದ್ದ ಮಕ್ಕಳು ಸೇರಿ  17ಮಂದಿ ಸಜೀವ ದಹನ, ಮೋದಿ ಸಂತಾಪ
ಬೆಂಕಿ Image Credit source: PTI
ನಯನಾ ರಾಜೀವ್
|

Updated on: May 18, 2025 | 12:23 PM

Share

ಹೈದರಾಬಾದ್, ಮೇ 18: ಚಾರ್​ಮಿನಾರ್(CharMinar)​ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್  ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.

ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೋದಿ ಸಂತಾಪ, ಪರಿಹಾರ ಘೋಷಣೆ

ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮಾತನಾಡಿ, ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಇಂದು ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ. ಇಂತಹ ಘಟನೆಗಳು ತುಂಬಾ ದುಃಖಕರ ಎಂದಿದ್ದಾರೆ.

ಮತ್ತಷ್ಟು ಓದಿ:Video: ಹೈದರಾಬಾದ್: ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, 17 ಮಂದಿ ಸಾವು

ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ