
ಹೈದರಾಬಾದ್, ಮೇ 18: ಚಾರ್ಮಿನಾರ್(CharMinar) ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್ ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.
ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೋದಿ ಸಂತಾಪ, ಪರಿಹಾರ ಘೋಷಣೆ
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
#WATCH | Hyderabad | Telangana DGP Dr Jitender reaches the Gulzar House near Charminar, to inspect the massive fire that broke out in a building earlier today. pic.twitter.com/EUYk2tJxoB
— ANI (@ANI) May 18, 2025
ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮಾತನಾಡಿ, ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಇಂದು ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ. ಇಂತಹ ಘಟನೆಗಳು ತುಂಬಾ ದುಃಖಕರ ಎಂದಿದ್ದಾರೆ.
ಮತ್ತಷ್ಟು ಓದಿ:Video: ಹೈದರಾಬಾದ್: ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17 ಮಂದಿ ಸಾವು
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ