ತಮಿಳುನಾಡು: ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಅಗ್ನಿ ಅವಘಡ
ನಾಗಮಂಗಲ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಳಗ್ಗೆ 5:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಸ್ಥಳದಿಂದ ನೌಕರರನ್ನು ಸ್ಥಳಾಂತರಿಸಲು ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ ಮತ್ತು ಇದುವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ
ಹೊಸೂರು ಸೆಪ್ಟೆಂಬರ್ 28: ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ತಯಾರಿಕಾ ಘಟಕದಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸೆಲ್‌ಫೋನ್ ತಯಾರಿಕಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೌಕರರನ್ನು ಆವರಣದಿಂದ ತೆರವುಗೊಳಿಸಲಾಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಆಸ್ತಿ ಹಾನಿ ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದ್ದು,ಅಗ್ನಿಶಾಮಕ ದಳಗಳು ಬೆಂಕಿಯನ್ನು ನಿಯಂತ್ರಿಸಲು ಕೆಲಸ ಮಾಡುತ್ತಿವೆ.
ನಾಗಮಂಗಲ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಳಗ್ಗೆ 5:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಸ್ಥಳದಿಂದ ನೌಕರರನ್ನು ಸ್ಥಳಾಂತರಿಸಲು ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ ಮತ್ತು ಇದುವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ.
Fire breaks out at Tata Electronics manufacturing unit in Hosur, Tamil Nadu. It is learnt that around 1,500 workers were on duty. A company spokesperson said: “There has been an unfortunate incident of fire at our plant in Hosur, Tamil Nadu. Our emergency protocols at the plant… pic.twitter.com/099tak7AgP
— Sangeetha Kandavel (@sang1983) September 28, 2024
ಘಟನೆಯ ಸಮಯದಲ್ಲಿ, ಸುಮಾರು 1,500 ಕಾರ್ಮಿಕರು ಮೊದಲ ಪಾಳಿಯಲ್ಲಿ ಕರ್ತವ್ಯದಲ್ಲಿದ್ದರು. ಬೆಂಕಿ ಉಂಟಾಗಲು ಕಾರಣ ತಿಳಿದುಬಂದಿಲ್ಲ.
ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ವಕ್ತಾರರು,ತಮಿಳುನಾಡಿನ ತಮ್ಮ ಹೊಸೂರು ಘಟಕದಲ್ಲಿ ಬೆಂಕಿ ಅವಘಡ ಸಂಭಸಿದೆ ಎಂದು ಹೇಳಿರುವುದಾಗಿ ಮನಿ ಕಂಟ್ರೋಲ್‌ಗೆ ವರದಿ ಮಾಡಿದೆ. ಎಲ್ಲಾ ಉದ್ಯೋಗಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವ ತುರ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ. ಬೆಂಕಿಗೆ ಕಾರಣ ಏನು ಎಂದು ತನಿಖೆ ನಡೆಸಲಾಗುತ್ತದೆ.ಕಂಪನಿಯು ತನ್ನ ಉದ್ಯೋಗಿಗಳು ಮತ್ತು ಮಧ್ಯಸ್ಥಗಾರರನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಕ್ತಾರರು ಹೇಳಿದ್ದಾರೆ.
ಉಸಿರಾಟದ ತೊಂದರೆ ಅನುಭವಿಸುತ್ತಿರುವ ಮೂವರು ನೌಕರರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಎಲ್ಲಾ ನೌಕರರು ಸುರಕ್ಷಿತವಾಗಿ ಆವರಣವನ್ನು ಖಾಲಿ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ