ಗುಜರಾತ್‌ನ ಜಾಮ್‌ನಗರದ 36 ಕೊಠಡಿಗಳ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ: 25 ಮಂದಿ ಅಗ್ನಿಗಾಹುತಿ ಶಂಕೆ

ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು. ಈ ನಡುವೆ 20 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಗುಜರಾತ್‌ನ ಜಾಮ್‌ನಗರದ  36 ಕೊಠಡಿಗಳ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ: 25 ಮಂದಿ ಅಗ್ನಿಗಾಹುತಿ ಶಂಕೆ
ಗುಜರಾತ್‌ನ ಜಾಮ್‌ನಗರದ 36 ಕೊಠಡಿಗಳ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ: 25 ಮಂದಿ ಅಗ್ನಿಗಾಹುತಿ ಶಂಕೆ
TV9kannada Web Team

| Edited By: sadhu srinath

Aug 11, 2022 | 10:47 PM

ಗುಜರಾತ್‌: ಗುಜರಾತ್‌ನ ಜಾಮ್‌ನಗರದಲ್ಲಿರುವ (Jamnagar) 36 ಕೊಠಡಿಗಳ ಅಲೆಂಟೊ ಖಾಸಗಿ ಹೋಟೆಲ್‌ನಲ್ಲಿ (36 room Alento hotel) ಗುರುವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 25 ಮಂದಿ ಬೆಂಕಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಮೂಲಗಳು ತಿಳಿಸಿವೆ. ಹೋಟೆಲ್ ಜಾಮ್‌ನಗರ ನಗರ ಕೇಂದ್ರದಿಂದ ದ್ವಾರಕಾ (Dwarka) ಕಡೆಗೆ 25 ಕಿಮೀ ದೂರದಲ್ಲಿದೆ.

ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ (short circuit) ಬೆಂಕಿ ಕಾಣಿಸಿಕೊಂಡಿರಬಹುದು. ಈ ನಡುವೆ 20 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ತಾಜಾ ಮಾಹಿತಿಗಳ ಪ್ರಕಾರ…

ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯಲ್ಲಿ ಸಿಲುಕಿದ್ದ ಸುಮಾರು 25 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

“ಹೋಟೆಲ್‌ನಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸದ್ಯ ಬೆಂಕಿಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಹೊಗೆಯಿಂದಾಗಿ ಉಸಿರಾಟದ ತೊಂದರೆ ಅನುಭವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಾಮ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಪ್ರೇಮ್‌ಸುಖ್ ದೇಲು (Premsukh Delu) ತಿಳಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada