AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ

ಉತ್ತರಾಖಂಡದ ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ ಸಂಭವಿಸಿದ್ದು,ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ
ಚಮೋಲಿಯಲ್ಲಿ ಭೂ ಕುಸಿತ
ರಶ್ಮಿ ಕಲ್ಲಕಟ್ಟ
|

Updated on:Jul 10, 2024 | 12:56 PM

Share

ಚಮೋಲಿ ಜುಲೈ 10: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ (Landslide) ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Badrinath National Highway) ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜೋಶಿಮಠದ ಚುಂಗಿ ಧಾರ್‌ನಲ್ಲಿ ಬೆಟ್ಟದ ಬೃಹತ್ ಭಾಗವು ಕುಸಿದು ರಸ್ತೆಯ ಮೇಲೆ ಬೀಳುತ್ತಿರುವುದು, ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದನ್ನು 30 ಸೆಕೆಂಡುಗಳ ವಿಡಿಯೊ ತೋರಿಸುತ್ತದೆ. ಜನರು ಭಯಭೀತರಾಗಿ ಸುರಕ್ಷಿತ ಜಾಗಕ್ಕೆ ಓಡುತ್ತಿರುವುದನ್ನು ವಿಡಿಯೊ ತೋರಿಸುತ್ತದೆ. ಅವರಲ್ಲಿ ಹಲವರು ತಮ್ಮ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿರುವುದು ಕಂಡುಬಂದಿದೆ.

ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಅದೇ ವೇಳೆ ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹಲವಾರು ಗ್ರಾಮಗಳು ಭಾರೀ ಪ್ರಮಾಣದಲ್ಲಿ ಜಲಾವೃತವಾಗಿವೆ.

ಚಮೋಲಿಯಲ್ಲಿ ಎರಡು ಸ್ಥಳಗಳಲ್ಲಿ ಅವಶೇಷಗಳು ಬಿದ್ದು ರಾಶಿಯಾಗಿದ್ದರಿಂದ ಶುಕ್ರವಾರವೂ ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಭಾನೇರ್ಪಾನಿ-ಪಿಪಾಲ್ಕೋಟಿ ನಾಗ ಪಂಚಾಯತ್ ರಸ್ತೆ ಮತ್ತು ಅಂಗತಾಲಾ ರಸ್ತೆ ಸಂಚಾರದ ಮೇಲೂ ಇದು ಪರಿಣಾಮ ಬೀರಿದ್ದು ಅನೇಕ ಪ್ರಯಾಣಿಕರು ಮತ್ತು ಸ್ಥಳೀಯರು ಸಿಕ್ಕಿಹಾಕಿಕೊಂಡರು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನೀಡುವ ಕುರಿತು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ಶನಿವಾರ, ಹೈದರಾಬಾದ್‌ನ ಇಬ್ಬರು ಪ್ರವಾಸಿಗರು ಚಮೋಲಿ ಜಿಲ್ಲೆಯಲ್ಲಿ ಭೂಕುಸಿತದ ವೇಳೆ ಬಂಡೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರ ದೇಹಗಳನ್ನು ಭೂಕುಸಿತದ ಅವಶೇಷಗಳಿಂದ ಹೊರತೆಗೆಯಲಾಯಿತು.  ಏತನ್ಮಧ್ಯೆ, ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕಚೇರಿ ನೀಡಿದ್ದು, ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದ್ದ ಚಾರ್ ಧಾಮ್ ಯಾತ್ರೆ ಸೋಮವಾರ ಪುನರಾರಂಭವಾಯಿತು. ಭೂಕುಸಿತದಿಂದಾಗಿ ರುದ್ರಪ್ರಯಾಗ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯೂ ಬಂದ್ ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Wed, 10 July 24

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?