AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, ಐವರು ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Kerala Landslide: ಕೇರಳದ ವಯನಾಡಿನಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಬಾರಿ ಗುಡ್ಡ ಕುಸಿದಿದ್ದು ಐವರು ಸಾವನ್ನಪ್ಪಿದ್ದು ಮಣ್ಣಿನ ಅವಶೇಷಗಳಡಿ 100ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ತೀವ್ರಗೊಂಡಿದೆ.

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, ಐವರು ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಕೇರಳ-ಭೂಕುಸಿತImage Credit source: India TV
ನಯನಾ ರಾಜೀವ್
|

Updated on:Jul 30, 2024 | 9:32 AM

Share

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೊದಲ ಭೂಕುಸಿತವು ಸುಮಾರು 2 ಗಂಟೆಗೆ ಪ್ರದೇಶಕ್ಕೆ ಅಪ್ಪಳಿಸಿತು. ವಿವರಗಳ ಪ್ರಕಾರ, ಜಿಲ್ಲೆಯಲ್ಲಿ ಮುಂಜಾನೆ 4.10 ರ ಸುಮಾರಿಗೆ ಮತ್ತೊಂದು ಭೂಕುಸಿತ ಸಂಭವಿಸಿದೆ. ವಯನಾಡ್ ಜಿಲ್ಲೆಯ ಅಧಿಕಾರಿಗಳ ಪ್ರಕಾರ, ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುವ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ.

ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.

ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ.

ಮತ್ತಷ್ಟು ಓದಿ: ಶಿರೂರು ಗುಡ್ಡ ಕುಸಿತ: ಟ್ರಕ್​ ನದಿಯ 24 ಅಡಿ ಆಳದಲ್ಲಿದೆ, ಅದರಲ್ಲೊಂದು ದೇಹವಿದೆ: ಸ್ವಾಮೀಜಿ ಸ್ಫೋಟಕ ಭವಿಷ್ಯ

ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್, ನಿಯಂತ್ರಣ ಕೊಠಡಿಯನ್ನು ತೆರೆದಿದೆ ಎಂದು ಅವರು ಹೇಳಿದರು. ತುರ್ತು ಸಹಾಯದ ಅಗತ್ಯವಿರುವವರು ಈ ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು ,  9656938689 ಮತ್ತು 8086010833. ಎರಡು IAF ಹೆಲಿಕಾಪ್ಟರ್‌ಗಳು Mi-17 ಮತ್ತು ALH ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಸೂಲೂರಿನಿಂದ ಹೊರಟಿವೆ.

ಆದರೆ ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಏತನ್ಮಧ್ಯೆ, ಮುಂದಿನ 3 ಗಂಟೆಗಳಲ್ಲಿ ಕೇರಳ, ಮಹಾರಾಷ್ಟ್ರ, ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:57 am, Tue, 30 July 24