Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಚಂಡೀಗಢ ವಿಶ್ವವಿದ್ಯಾಲಯದ 60 ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್; ಭುಗಿಲೆದ್ದ ಪ್ರತಿಭಟನೆ

ವಿದ್ಯಾರ್ಥಿನಿಯರು ಅರೆನಗ್ನವಾಗಿರುವ ಮತ್ತು ಸ್ನಾನ ಮಾಡುತ್ತಿರುವ ವಿಡಿಯೋ ಸೋರಿಕೆಯಾಗಿದೆ. ಈ ವಿಡಿಯೋವನ್ನು ಅದೇ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಮೊಬೈಲ್​ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾಳೆ.

Big News: ಚಂಡೀಗಢ ವಿಶ್ವವಿದ್ಯಾಲಯದ 60 ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್; ಭುಗಿಲೆದ್ದ ಪ್ರತಿಭಟನೆ
ಚಂಡೀಗಢ ವಿಶ್ವವಿದ್ಯಾಲಯದ 60 ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್; ಭುಗಿಲೆದ್ದ ಪ್ರತಿಭಟನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 18, 2022 | 12:37 PM

ಮೊಹಾಲಿ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾನಿಲಯದ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿದೆ. ಈ ಆಕ್ಷೇಪಾರ್ಹ ವಿಡಿಯೋ (Viral Video) ಸೋರಿಕೆಯಾದ ನಂತರ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವು ವಿದ್ಯಾರ್ಥಿನಿಯರು ಅವಮಾನದಿಂದ ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ವಿದ್ಯಾರ್ಥಿನಿಯರು ಅರೆನಗ್ನವಾಗಿರುವ ಮತ್ತು ಸ್ನಾನ ಮಾಡುತ್ತಿರುವ ವಿಡಿಯೋಗಳಿಗೆ ಭಾರೀ ವಿರೋಧವೂ ವ್ಯಕ್ತವಾಗಿದೆ. ಈ ವಿಡಿಯೋವನ್ನು ಅದೇ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಮೊಬೈಲ್​ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾಳೆ. ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  1. ವೈರಲ್ ಆಗಿರುವ ವಿಡಿಯೋದಲ್ಲಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರತಿಭಟನೆಯ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂಡೀಗಢ ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
  2. ಪಂಜಾಬ್ ಆಡಳಿತ ಪಕ್ಷವಾದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿ ಈ ಘಟನೆಯನ್ನು ಗಂಭೀರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ. ಹೆಣ್ಣುಮಕ್ಕಳ ಮರ್ಯಾದೆ ತೆಗೆಯುವ ಕೆಲಸ ಮಾಡಿರುವುದು ನಾಚಿಕೆಯ ಸಂಗತಿ ಎಂದಿದ್ದಾರೆ.
  3. ಇದು ತುಂಬಾ ಗಂಭೀರ ಮತ್ತು ನಾಚಿಕೆಗೇಡಿನ ಸಂಗತಿ. ಇದರಲ್ಲಿ ಭಾಗಿಯಾದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿದೆ. ಇದರಿಂದ ನೊಂದ ಹೆಣ್ಣುಮಕ್ಕಳು ಧೈರ್ಯ ತಂದುಕೊಳ್ಳಬೇಕು. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
  4. ಪಂಜಾಬ್ ಶಿಕ್ಷಣ ಸಚಿವರು ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. “ನಾನು ಚಂಡೀಗಢ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳನ್ನು ಶಾಂತವಾಗಿರಲು ವಿನಂತಿಸುತ್ತೇನೆ, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಇದು ಅತ್ಯಂತ ಸೂಕ್ಷ್ಮ ವಿಷಯ. ಇದು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದೆ. ಮಾಧ್ಯಮ ಸೇರಿದಂತೆ ನಾವೆಲ್ಲರೂ ತುಂಬಾ ಜಾಗರೂಕರಾಗಿರಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
  5. ಆನ್‌ಲೈನ್‌ನಲ್ಲಿ ವೀಡಿಯೋಗಳನ್ನು ಸೋರಿಕೆ ಮಾಡಿದ ವಿದ್ಯಾರ್ಥಿನಿ ಇತರರಿಂದ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಳು ಎಂದು ಹೇಳಲಾಗಿದೆ. ಈ ವಿಷಯ ಬೆಳಕಿಗೆ ಬಂದ ನಂತರ, ನೂರಾರು ವಿದ್ಯಾರ್ಥಿಗಳು ಯೂನಿವರ್ಸಿಟಿ ಕ್ಯಾಂಪಸ್ ಮತ್ತು ಲೂಧಿಯಾನ-ಚಂಡೀಗಢ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಪ್ರತಿಭಟನೆ ನಡೆಸಿದರು.
  6. ಸ್ನಾನ ಮಾಡುವಾಗ 60 ವಿದ್ಯಾರ್ಥಿನಿಯರ ವಿಡಿಯೋಗಳನ್ನು ಆರೋಪಿ ಚಿತ್ರೀಕರಿಸಿದ್ದಾಳೆ. ನಂತರ ಆ ವೀಡಿಯೊವನ್ನು ಸ್ನೇಹಿತರಿಗೆ ಕಳುಹಿಸಿದ್ದಾಳೆ.
  7. ಬಳಿಕ ಆ ವೀಡಿಯೊವನ್ನು ಅಂತರ್ಜಾಲದಲ್ಲಿ ಬಿಡುಗಡೆ ಮಾಡಲಾಗಿದೆ. ಇದಾದ ಬಳಿಕ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
  8. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ವಿದ್ಯಾರ್ಥಿನಿಯರು.
  9. ಆರೋಪಿ ಮಹಿಳೆ ಬಹಳ ಸಮಯದಿಂದ ಇಂತಹ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡುತ್ತಿದ್ದು, ಶಿಮ್ಲಾದ ಯುವಕನಿಗೆ ಕಳುಹಿಸುತ್ತಿದ್ದಳು ಎಂದು ಝೀ ನ್ಯೂಸ್ ವರದಿ ಮಾಡಿದೆ.
  10. ಆದರೆ, ಇದುವರೆಗೆ ನಮ್ಮ ತನಿಖೆಯಲ್ಲಿ ಆರೋಪಿಯ ಒಂದೇ ಒಂದು ವಿಡಿಯೋ ಇರುವುದು ಪತ್ತೆಯಾಗಿದೆ. ಅವಳು ಬೇರೆಯವರ ಯಾವುದೇ ವೀಡಿಯೊವನ್ನು ರೆಕಾರ್ಡ್ ಮಾಡಿಲ್ಲ. ಆಕೆಯ ಮೊಬೈಲ್ ಫೋನ್‌ಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ