AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ

ಮಥುರಾದಲ್ಲಿರುವ ಕೃಷ್ಣ ದೇಗುಲ ಸರ್ವೆಗೆ ಮಥುರಾ ಹೈಕೋರ್ಟ್ ಆದೇಶ ನೀಡಿದೆ. ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶ ನೀಡಿದೆ.

Krishna Janmabhoomi Case: ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ Image Credit source: google image
TV9 Web
| Edited By: |

Updated on:Dec 24, 2022 | 5:12 PM

Share

ಉತ್ತರಪ್ರದೇಶ: ಮಥುರಾದಲ್ಲಿರುವ ಕೃಷ್ಣ ದೇಗುಲ (Mathura Krishna Temple) ಸಮೀಕ್ಷೆಗೆ (Survey) ಮಥುರಾ ಸ್ಥಳೀಯ ಕೋರ್ಟ್ ಆದೇಶ ನೀಡಿದೆ. ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ಮಾಡಲು ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಈ ಬಗ್ಗೆ ವರದಿಯನ್ನು ಕೋರ್ಟ್​​ಗೆ ಸಲ್ಲಿಸಿದೆ. ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿಯನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಶುದ್ಧೀಕರಣ ವಿಧಿಗಳನ್ನು ನೆರವೇರಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಮಹಾಸಭಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿವಾದ ದೇಶದ ಗಮನ ಸೆಳೆದಿರುವ ಬೆನ್ನಲ್ಲೇ ಮಥುರದಲ್ಲಿಯೂ ಬಹುಕಾಲದ ವಿವಾದ ಮತ್ತೆ ಗರಿಗೆದರಿತ್ತು.

ಶಾಹಿ ಈದ್ಗಾ ಮಸೀದಿ ಇರುವ ಸ್ಥಳದಲ್ಲಿಯೇ ಶ್ರೀಕೃಷ್ಣನ ಪುರಾತನ ದೇಗುಲವೂ ಇತ್ತು. ಶ್ರೀಕೃಷ್ಣನ ಜನ್ಮಭೂಮಿಯ ಗರ್ಭಗೃಹದ ಮೇಲೆಯೇ ಮಸೀದಿಯನ್ನು ನಿರ್ಮಿಸಲಾಗಿದೆ. ಮಸೀದಿಗೆ ಪ್ರವೇಶಿಸಿ ಅಭಿಷೇಕ ನಡೆಸಲು ಅವಕಾಶ ನೀಡಬೇಕು ಎಂದು ಹಿಂದೂ ಮಹಾಸಭಾಗದ ಖಜಾಂಚಿ ದಿನೇಶ್ ಶರ್ಮಾ ವಿನಂತಿಸಿದ್ದರು. ‘ಅವರು ಮೊದಲು ತಮ್ಮ ಖಡ್ಗದ ಬಲದಿಂದ ದಾಳಿ ನಡೆಸಿದರು. ಆದರೆ ಈಗ ನಾವು ನಮ್ಮ ಪುರಾತನ ಪರಂಪರೆಯನ್ನು ಮರಳಿ ಪಡೆಯಲು ಇಚ್ಛಿಸುತ್ತಿದ್ದೇವೆ. ಈ ಮಸೀದಿಯನ್ನು ತೆರವುಗೊಳಿಸಿ, ಹಿಂದೂಗಳ ಆತ್ಮಗೌರವಕ್ಕೆ ಮನ್ನಣೆ ನೀಡಬೇಕು’ ಎಂದು ಅವರು ಕೋರಿದ್ದರು. ನಂತರ ನ್ಯಾಯಲಯವು ಈ ಪ್ರಕರಣದ ತೀರ್ಪನ್ನು  ಮೇ 31 ಮುಂದೂಡಿತ್ತು. ಆದರೆ ಇದೀಗ ಮಥುರಾ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಮಥುರಾದಲ್ಲಿರುವ ಕೃಷ್ಣ ದೇಗುಲ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಆದೇಶವನ್ನು ನೀಡಿದೆ.

ಇದನ್ನು ಓದಿ: Krishna Janmabhoomi Case: ಮಥುರಾದ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದ: ಮುಂದಿನ ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ

ಶ್ರೀಕೃಷ್ಣ ದೇವಾಲಯಕ್ಕೆ ಸೇರಿದ್ದು ಎನ್ನುವ 13.37 ಎಕರೆ ಭೂಮಿಯನ್ನು ಸಂಪೂರ್ಣವಾಗಿ ಹಿಂದೂಗಳಿಗೆ ನೀಡಬೇಕು ಎನ್ನುವುದು ಹಿಂದೂ ಮಹಾಸಭಾದ ವಿನಂತಿ. ಈ ಭೂಮಿಯಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿದ್ದ ಶಾಹಿ ಈದ್ಗಾ ಮಸೀದಿ ಸಮಿತಿಯ ಕಾರ್ಯದರ್ಶಿ ತನ್ವೀರ್ ಅಹ್ಮದ್, 1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಎಲ್ಲರೂ ಗೌರವಿಸಬೇಕು. ಮಥುರಾದಲ್ಲಿ ಗೋಡೆಯ ಒಂದು ಬದಿಗೆ ಕೃಷ್ಣನ ಆಲಯವಿದ್ದರೆ, ಮತ್ತೊಂದು ಬದಿಗೆ ಮಸೀದಿಯಿದೆ. ಬಹುಕಾಲದಿಂದ ಇದು ಹೀಗೆಯೇ ನಡೆದುಕೊಂಡು ಬಂದಿದೆ. ಯಾರಿಗೂ ಇದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ’ ಎಂದು ಹೇಳಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Sat, 24 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್