Hema Malini: ಕೆನ್ನೆಯನ್ನು ರಸ್ತೆಗೆ ಹೋಲಿಸುತ್ತಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಹಿರಿಯ ನಟಿ, ಮಥುರಾ ಕ್ಷೇತ್ರದ ಸಂಸದೆ ಹೇಮಾ ಮಾಲಿನಿ ಪದೇ ಪದೇ ತಮ್ಮ ಕೆನ್ನೆ ರಾಜಕೀಯ ಮುಖಂಡರ ಹೋಲಿಕೆಗೆ ಗುರಿಯಾಗುತ್ತಿರುವುದರ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಅವರು ಹೇಳಿದ್ದಾರೆ.

Hema Malini: ಕೆನ್ನೆಯನ್ನು ರಸ್ತೆಗೆ ಹೋಲಿಸುತ್ತಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಸಂಸದೆ ಹೇಮಾ ಮಾಲಿನಿ
ಹೇಮಾ ಮಾಲಿನಿ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: Dec 21, 2021 | 8:55 AM

ಬಾಲಿವುಡ್ ಹಿರಿಯ ನಟಿ, ಮಥುರಾ ಕ್ಷೇತ್ರದ ಸಂಸದೆ ಹೇಮಾ ಮಾಲಿನಿ (Hema Malini) ಪದೇ ಪದೇ ತಮ್ಮ ಕೆನ್ನೆ ರಾಜಕೀಯ ಮುಖಂಡರ ಹೋಲಿಕೆಗೆ ಗುರಿಯಾಗುತ್ತಿರುವುದರ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಸಚಿವ ಗುಲಾಬ್​ರಾವ್ ಪಾಟೀಲ್ (GulabRao Patil) ಅವರು ತಮ್ಮ ಸ್ವಕ್ಷೇತ್ರದ ಸುಗಮ ರಸ್ತೆಗಳನ್ನು ಇತ್ತೀಚೆಗೆ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ್ದರು. ಈ ಹೇಳಿಕೆಗೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದು, ಅಂತಹ ಕಾಮೆಂಟ್‌ಗಳು ಒಳ್ಳೆಯದಲ್ಲ ಎಂದು ಕಟುವಾಗಿ ನುಡಿದಿದ್ದಾರೆ. ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಹೇಮಾ, ‘‘”ನನ್ನ ಕೆನ್ನೆಗಳನ್ನು ಸರಿಯಾಗಿ, ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ’’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಹಲವು ವರ್ಷಗಳ ಹಿಂದೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಮೊದಲ ಬಾರಿಗೆ ಹೇಮಾ ಮಾಲಿನಿ ಅವರ ಕೆನ್ನೆಯನ್ನು ರಸ್ತೆಗಳಿಗೆ ಹೋಲಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ಹಲವು ರಾಜಕೀಯ ಮುಖಂಡರು ಇದೇ ಹೇಳಿಕೆಯನ್ನು ಪುನರಾವರ್ತಿಸಿದ್ದು, ‘ಟ್ರೆಂಡ್’ ಮುಂದುವರೆದಿದೆ ಎಂದು ಹೇಮಾ ಮಾಲಿನಿ ನುಡಿದಿದ್ದಾರೆ.

ಇಂತಹ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಹೇಮಾ ಮಾಲಿನಿ, ‘‘ಇಂಥದ್ದು ಆಗಬಾರದು’’ ಎಂದು ಹೇಳಿದ್ದಾರೆ. ಅಂತಹ ಹೇಳಿಕೆಗಳನ್ನು ಸಾರ್ವಜನಿಕರು ಹೇಳಿದರೆ ನಿರ್ಲಕ್ಷಿಸಬಹುದು. ಆದರೆ ರಾಜಕೀಯ ಮುಖಂಡರು, ಸಂಸತ್ ಸದಸ್ಯರು ಇಂತಹ ಹೇಳಿಕೆಗಳನ್ನು ನೀಡಿದರೆ ಅದು ಉತ್ತಮ ಅಭಿರುಚಿಯಲ್ಲಿದೆ ಎಂದು ತಮಗನ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಇಂತಹ ಪದಪ್ರಯೋಗ ಬಳಸುವ ಮುನ್ನ ಎಚ್ಚರಿಕೆಯಿಂದಿರಬೇಕು ಎಂದ ಅವರು, ‘‘ಯಾವುದೇ ಮಹಿಳೆಯಗೆ ಅಮತಹ ವಿಷಯಗಳನ್ನು ಹೋಲಿಸಿ ಮಾತನಾಡಬಾರದು’’ ಎಂದು ಕಿವಿಮಾತು ಹೇಳಿದ್ದಾರೆ.

ಎಎನ್​ಐ ಜತೆ ಹೇಮಾ ಮಾಲಿನಿ ಮಾತನಾಡಿರುವುದು ಇಲ್ಲಿದೆ:

ಪ್ರಕರಣವೇನು? ಭಾನುವಾರ ನಡೆದಿದ್ದ ರಾಜಕೀಯ ಸಮಾವೇಶವೊಂದರಲ್ಲಿ ಗುಲಾಬ್​ರಾವ್ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕುರಿತು ಮಾತನಾಡಿದ್ದರು. ಆಗ ಅವರು, ಹೇಮಾ ಮಾಲಿನಿ ಅವರ ಕೆನ್ನೆಯಂತೆ ರಸ್ತೆಗಳು ನುಣುಪಾಗಿವೆ ಎಂದಿದ್ದರು. ಈ ಹೇಳಿಕೆ ವಿವಾದ ಪಡೆದುಕೊಂಡಿತ್ತು. ಬಳಿಕ ಅವರು ಕ್ಷಮೆಯಾಚಿಸಿ, ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ ಎಂದಿದ್ದರು. ‘‘ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜರನ್ನು ಆರಾಧಿಸುವ ಶಿವಸೇನೆಗೆ ಸೇರಿದವನು. ಮಹಿಳೆಯರನ್ನು ಗೌರವಿಸುವುದನ್ನು ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ನಮಗೆ ಕಲಿಸಿದ್ದಾರೆ’’ ಎಂದು ಅವರು ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ:

ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದಕ್ಕೆ ಕ್ಷಮೆಯಾಚಿಸಿದ ಮಹಾರಾಷ್ಟ್ರ ಸಚಿವ ಗುಲಾಬ್​​ರಾವ್ ಪಾಟಿಲ್

Tamannaah Bhatia Birthday: 32ನೇ ವಸಂತಕ್ಕೆ ಕಾಲಿಟ್ಟ ತಮನ್ನಾ; ಮಿಲ್ಕಿ ಬ್ಯೂಟಿ ಕುರಿತು ನಿಮಗೆ ತಿಳಿದಿಲ್ಲದ ಸಂಗತಿಗಳು ಇಲ್ಲಿವೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ