AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಶಃ ಆತ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು; ಪ್ರಶಾಂತ್ ಕಿಶೋರ್ ವಿರುದ್ಧ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ

ಸಿಎಂ ನಿತೀಶ್ ಕುಮಾರ್ ಈ ವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರ ಜೊತೆ ಸಭೆ ನಡೆಸಿದ್ದರು.

ಬಹುಶಃ ಆತ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು; ಪ್ರಶಾಂತ್ ಕಿಶೋರ್ ವಿರುದ್ಧ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ
ನಿತೀಶ್ ಕುಮಾರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 08, 2022 | 8:36 AM

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಈ ವಾರ ದೆಹಲಿಗೆ ಭೇಟಿ ನೀಡುವ ಮೂಲಕ ಪ್ರತಿಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಬುಧವಾರ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್, ಪ್ರಶಾಂತ್ ಕಿಶೋರ್ (Prashant Kishor) ಬಹುಶಃ ಬಿಜೆಪಿಗೆ ಸಹಾಯ ಮಾಡಲು ಬಯಸಿರಬಹುದು ಎಂದು ಟೀಕಿಸಿದ್ದಾರೆ.

ಸಿಎಂ ನಿತೀಶ್ ಕುಮಾರ್ ಈ ವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರ ಜೊತೆ ಸಭೆ ನಡೆಸಿದ್ದರು. 2024ರ ರಾಷ್ಟ್ರೀಯ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಗ್ಗಟ್ಟಿನ ಬಲವನ್ನು ಪ್ರದರ್ಶಿಸಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ 71 ವರ್ಷದ ಜೆಡಿಯು ನಾಯಕ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡಿದ್ದರು.

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಆರ್​ಜೆಡಿ ಮತ್ತಿತರ ವಿಪಕ್ಷಗಳ ಜೊತೆ ಮಹಾಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದರು. ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ತೆರಳಲಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ವಿದೇಶದಿಂದ ಹಿಂದಿರುಗಿದ ನಂತರ ಅವರನ್ನೂ ಭೇಟಿಯಾಗುವುದಾಗಿ ನಿತೀಶ್ ಕುಮಾರ್ ಹೇಳಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ರಾಹುಲ್ ಗಾಂಧಿ, ಹೆಚ್​ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಈ ವೇಳೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಇತರ ರಾಜಕೀಯ ಪಕ್ಷಗಳೊಂದಿಗೆ ಕೆಲಸ ಮಾಡುವುದು ಅವರ ವ್ಯವಹಾರವಾಗಿದೆ. ಅವರು ಬಿಹಾರದಲ್ಲಿ ಏನು ಮಾಡಿದರೂ ಅದು ನಮಗೆ ಸಂಬಂಧಿಸಿದ್ದಲ್ಲ. 2005ರಿಂದ ಏನು ಮಾಡಲಾಗಿದೆ ಎಂಬುದರ ‘ಎಬಿಸಿ’ ಅವರಿಗೆ ತಿಳಿದಿದೆಯೇ? ಅವರ ಹೇಳಿಕೆಗಳನ್ನು ನೋಡುತ್ತಿದ್ದರೆ ಅವರು ಬಿಜೆಪಿಯನ್ನು ಉಳಿಸಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಪ್ರಶಾಂತ್ ಕಿಶೋರ್​ಗೆ ಪ್ರಚಾರವಷ್ಟೇ ಮುಖ್ಯ ಎಂದು ಸಿಎಂ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರನ್ನು 2020ರಲ್ಲಿ ಜೆಡಿಯುದಿಂದ ವಜಾಗೊಳಿಸಲಾಗಿತ್ತು. ಒಂದೆರಡು ತಿಂಗಳ ಹಿಂದೆ, ಅವರು ಮುಖ್ಯವಾಗಿ ಬಿಹಾರದ ಮೇಲೆ ಕೇಂದ್ರೀಕರಿಸುವುದಾಗಿ ಘೋಷಿಸಿದ್ದರು. ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರವನ್ನು ಟೀಕಿಸುತ್ತಲೇ ಇರುತ್ತಾರೆ.

“ನಾವು 2005ರಿಂದ ನಮ್ಮ ಕೆಲಸವನ್ನು ಮಾಡುತ್ತಿದ್ದೇವೆ. ಕೆಲವರು ಕೇವಲ ಹರಟೆ ಹೊಡೆಯುವ ಅಭ್ಯಾಸವನ್ನು ಇಟ್ಟುಕೊಂಡಿದ್ದಾರೆ. ಆದರೆ, ಮಾತನಾಡುವುದನ್ನು ಬಿಟ್ಟು ಅವರು ಬೇರೇನನ್ನೂ ಮಾಡುತ್ತಿಲ್ಲ” ಎಂದು ಸಿಎಂ ನಿತೀಶ್ ಕುಮಾರ್ ತಮ್ಮ ಟೀಕಾಕಾರರಿಗೆ ತಿರುಗೇಟು ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ