AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

May GST Collection: ಮೇ  ತಿಂಗಳಲ್ಲಿ ₹1.40 ಲಕ್ಷ ಕೋಟಿ ಜಿಎಸ್‌ಟಿ ಆದಾಯ ಸಂಗ್ರಹ; ಅಂಕಿ ಅಂಶ ಪ್ರಕಟಿಸಿದ ಕೇಂದ್ರ ಸರಕಾರ

ಕೇಂದ್ರ ಸರಕಾರವು ಮೇ 2022ರಲ್ಲಿ ಸಂಗ್ರಹವಾದ ಒಟ್ಟು ಜಿಎಸ್‌ಟಿ ಆದಾಯವನ್ನು ಪ್ರಕಟಿಸಿದೆ.  ಮೇ  ತಿಂಗಳಲ್ಲಿ ₹1.40 ಲಕ್ಷ ಕೋಟಿಗಿಂತ ಹೆಚ್ಚು ಆದಯಾ ಸಂಗ್ರಹವಾಗಿದೆ ಎಂದು ಬುಧವಾರ ಸರ್ಕಾರ ತನ್ನ ಅಂಕಿ ಅಂಶಗಳಲ್ಲಿ ತಿಳಿಸಿದೆ.

May GST Collection: ಮೇ  ತಿಂಗಳಲ್ಲಿ ₹1.40 ಲಕ್ಷ ಕೋಟಿ ಜಿಎಸ್‌ಟಿ ಆದಾಯ ಸಂಗ್ರಹ; ಅಂಕಿ ಅಂಶ ಪ್ರಕಟಿಸಿದ ಕೇಂದ್ರ ಸರಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 01, 2022 | 4:01 PM

Share

ನವದೆಹಲಿ: ಕೇಂದ್ರ ಸರಕಾರವು (Central Government) ಮೇ 2022ರಲ್ಲಿ ಸಂಗ್ರಹವಾದ ಒಟ್ಟು ಜಿಎಸ್‌ಟಿ (GST) ಆದಾಯವನ್ನು ಪ್ರಕಟಿಸಿದೆ.  ಮೇ (May) ತಿಂಗಳಲ್ಲಿ ₹1.40 ಲಕ್ಷ ಕೋಟಿಗಿಂತ ಹೆಚ್ಚು ಆದಯಾ ಸಂಗ್ರಹವಾಗಿದೆ ಎಂದು ಬುಧವಾರ ಸರ್ಕಾರ ತನ್ನ ಅಂಕಿ ಅಂಶಗಳಲ್ಲಿ ತಿಳಿಸಿದೆ. ಮೇ 2022 ರ ಆದಾಯವು ಕಳೆದ ವರ್ಷದ ಮೇ ತಿಂಗಳ ₹97,821 ಕೋಟಿಯ GST ಆದಾಯಕ್ಕಿಂತ 44% ಹೆಚ್ಚಾಗಿದೆ. ಆದರೆ ಹಿಂದಿನ ತಿಂಗಳ ಆದಾಯಕ್ಕಿಂತ ಶೇ 16% ಕಡಿಮೆಯಾಗಿದೆ. ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು ಸಾರ್ವಕಾಲಿಕ ಗರಿಷ್ಠ ₹1.67 ಲಕ್ಷ ಕೋಟಿಯನ್ನು ಮುಟ್ಟಿತ್ತು.

ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ಮೇ ತಿಂಗಳಲ್ಲಿ ಸಂಗ್ರಹವಾದ ಒಟ್ಟು ಜಿಎಸ್‌ಟಿ ಆದಾಯ ₹1,40,885 ಕೋಟಿ ಇದರಲ್ಲಿ ಸಿಜಿಎಸ್‌ಟಿ ₹25,036 ಕೋಟಿ, ಎಸ್‌ಜಿಎಸ್‌ಟಿ ₹32,001 ಕೋಟಿ, ಐಜಿಎಸ್‌ಟಿ ₹73,345 ಕೋಟಿ ಮತ್ತು ಸೆಸ್ ₹10,502 ಕೋಟಿ ಇದೆ. “ಆರ್ಥಿಕ ವರ್ಷದ ಮೊದಲ ತಿಂಗಳ ಏಪ್ರಿಲ್‌ನ ಆದಾಯಕ್ಕಿಂತ ಮೇ ತಿಂಗಳ ಸಂಗ್ರಹಣೆಯು ಯಾವಾಗಲೂ ಕಡಿಮೆಯಿರುತ್ತದೆ. ಇದು ಆರ್ಥಿಕ ವರ್ಷದ ಮುಕ್ತಾಯದ ಮಾರ್ಚ್‌ನ ಆದಾಯಕ್ಕೆ ಸಂಬಂಧಿಸಿದೆ. ಆದಾಗ್ಯೂ, 2022 ರ ಮೇ ತಿಂಗಳಿನಲ್ಲಿಯೂ ಸಹ ಒಟ್ಟು ಜಿಎಸ್‌ಟಿ ಸಂಗ್ರಹವು ₹ 1.40 ಲಕ್ಷ ಕೋಟಿಯ ಗಡಿಯನ್ನು ದಾಟಿರುವುದು ಉತ್ತೇಜನಕಾರಿಯಾಗಿದೆ, ”ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಮಿಂಟ್ ವರದಿ ಮಾಡಿದೆ.

ಇದನ್ನು ಓದಿ: ದೆಹಲಿ ಹೈಕೋರ್ಟ್​​​ಗೆ ಸಲ್ಲಿಸಿದ ಮನವಿ ವಾಪಸ್ ಪಡೆದ ಬಿಷ್ಣೋಯ್, ಪಂಜಾಬ್ ಕೋರ್ಟ್​​ ಮೆಟ್ಟಿಲೇರಲು ನಿರ್ಧಾರ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪ್ರಾರಂಭವಾದಾಗಿನಿಂದ ಮಾಸಿಕ ಜಿಎಸ್‌ಟಿ ಸಂಗ್ರಹವು ನಾಲ್ಕನೇ ಬಾರಿಗೆ ₹1.40 ಲಕ್ಷ ಕೋಟಿ ದಾಟಿದೆ. ತಿಂಗಳ ಅವಧಿಯಲ್ಲಿ, ಸರಕುಗಳ ಆಮದು ಆದಾಯವು ಶೇ 43 ರಷ್ಟು ಹೆಚ್ಚಾಗಿದೆ . ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವನ್ನು ಕಳೆದ ವರ್ಷ ಮೇಗೆ ಹೋಲಿಸದರೆ ಶೇ 44 ರಷ್ಟು ಹೆಚ್ಚಾಗಿದೆ. ಏಪ್ರಿಲ್ 2022 ರಲ್ಲಿ ಒಟ್ಟು ಇ-ವೇ ಬಿಲ್‌ಗಳ ಸಂಖ್ಯೆ 7.4 ಕೋಟಿಯಾಗಿದೆ, ಇದು ಸರ್ಕಾರದ ಅಂಕಿಅಂಶಗಳ ಪ್ರಕಾರ ಮಾರ್ಚ್ 2022 ರಲ್ಲಿ ಉತ್ಪತ್ತಿಯಾದ 7.7 ಕೋಟಿ ಇ-ವೇ ಬಿಲ್‌ಗಳಿಗಿಂತ ಶೇ 4 ರಷ್ಟು ಕಡಿಮೆಯಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 1 June 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!