Uttar Pradesh Politics: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಬಿಎಸ್​ಪಿ, ಮೈತ್ರಿ ಇಲ್ಲ ಎಂದ ಮಾಯಾವತಿ

|

Updated on: Jan 15, 2024 | 11:53 AM

ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್​ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್​ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.

Uttar Pradesh Politics: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಬಿಎಸ್​ಪಿ, ಮೈತ್ರಿ ಇಲ್ಲ ಎಂದ ಮಾಯಾವತಿ
ಮಾಯಾವತಿ
Image Credit source: Jagran
Follow us on

ಮುಂಬರಲಿರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಎಸ್​ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್​ಪಿ ವರಿಷ್ಠೆ ಮಾಯಾವತಿ(Mayawati) ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಾಯಾವತಿ ಅವರು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿ ಗೋಸುಂಬೆ ಎಂದು ಕರೆದಿದ್ದಾರೆ. ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.

ಮೈತ್ರಿ ಮಾಡಿಕೊಳ್ಳದೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರವು ದಿಟ್ಟ ಹೆಜ್ಜೆ ಎಂದೇ ಹೇಳಬಹುದು, ಇದು ವಿಶಿಷ್ಟವಾದ ಚುನಾವಣಾ ತಂತ್ರಕ್ಕೆ ವೇದಿಕೆಯನ್ನು ಸಿದ್ಧಪಡಿಸುವುದಂತೂ ಸತ್ಯ.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್‌ಪಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ.

ಒಂದೊಮ್ಮೆ ಇಂಡಿಯಾ ಮೈತ್ರಿಕೂಟಕ್ಕೆ ಸೇರಿದರೆ ಲಾಭ ಕಡಿಮೆ ನಷ್ಟವೇ ಹೆಚ್ಚು, ನಮ್ಮ ಮತಗಳ ಶೇಕಡಾವಾರು ಪ್ರಮಾಣವೂ ಕಡಿಮೆಯಾಗುತ್ತದೆ ಮತ್ತು ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ. ಮೈತ್ರಿ ಮಾಡಿಕೊಂಡರೆ ಬಿಎಸ್​ಪಿಯ ಸಂಪೂರ್ಣ ಮತವು ಮೈತ್ರಿ ಪಕ್ಷಕ್ಕೆ ಹೋಗುತ್ತದೆ ಎಂದಿದ್ದಾರೆ. ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 11:45 am, Mon, 15 January 24