ಬಡವರಿಗೆ ಕೊರೊನಾ ಲಸಿಕೆ ಉಚಿತವಾಗಿ ಸಿಗಲಿ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ ಭಾನುವಾರ ಸೀರಮ್ ಇನ್ಸ್​ಟ್ಯೂಟ್ ಅಭಿವೃದ್ಧಿ ಪಡಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಲಸಿಕೆಗಳನ್ನು ದೇಶದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಿದೆ.

ಬಡವರಿಗೆ ಕೊರೊನಾ ಲಸಿಕೆ ಉಚಿತವಾಗಿ ಸಿಗಲಿ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
preethi shettigar

| Edited By: Ghanashyam D M | ಡಿ.ಎಂ.ಘನಶ್ಯಾಮ

Jan 03, 2021 | 4:22 PM

ದೆಹಲಿ: ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ವಿಜ್ಞಾನಿಗಳಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಅಭಿನಂದನೆ ಸಲ್ಲಿಸಿದ್ದಾರೆ. ಕಡುಬಡವರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಕೇಂದ್ರ ಸರ್ಕಾರವನ್ನು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಭಾರತೀಯ ಮಹಾ ಔಷಧ ನಿಯಂತ್ರಕರು ಭಾನುವಾರ ಸೀರಮ್ ಇನ್​ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಲಸಿಕೆಗಳನ್ನು ದೇಶದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಿದ್ದರು. ಈ ಬೆಳವಣಿಗೆಯನ್ನು ಮಾಯಾವತಿ ಸ್ವಾಗತಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ಸ್ವದೇಶಿ ಕೋವಿಡ್ ವಿರೋಧಿ ಲಸಿಕೆ ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಇದನ್ನು ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ಅಭಿನಂದನೆಗಳು. ಬಡವರಿಗೆ ಕೇಂದ್ರ ಸರ್ಕಾರ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Corona Vaccine: ಆಕ್ಸ್​ಫರ್ಡ್-ಆಸ್ಟ್ರಾಜೆನೆಕಾ ಲಸಿಕೆಗೆ ಇಂಗ್ಲೆಂಡ್​ ಸರ್ಕಾರದ ಅನುಮತಿ.. ರೂಪಾಂತರ ಕೊರೊನಾ ವಿರುದ್ಧವೂ ಈ ವ್ಯಾಕ್ಸಿನ್ ಪರಿಣಾಮಕಾರಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada