ದೆಹಲಿ: ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ವಿಜ್ಞಾನಿಗಳಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಅಭಿನಂದನೆ ಸಲ್ಲಿಸಿದ್ದಾರೆ. ಕಡುಬಡವರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಕೇಂದ್ರ ಸರ್ಕಾರವನ್ನು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಭಾರತೀಯ ಮಹಾ ಔಷಧ ನಿಯಂತ್ರಕರು ಭಾನುವಾರ ಸೀರಮ್ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಿದ್ದರು. ಈ ಬೆಳವಣಿಗೆಯನ್ನು ಮಾಯಾವತಿ ಸ್ವಾಗತಿಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ಸ್ವದೇಶಿ ಕೋವಿಡ್ ವಿರೋಧಿ ಲಸಿಕೆ ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಇದನ್ನು ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ಅಭಿನಂದನೆಗಳು. ಬಡವರಿಗೆ ಕೇಂದ್ರ ಸರ್ಕಾರ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
अति-घातक कोरोनावायरस महामारी को लेकर आए स्वदेशी वैक्सीन (टीके) का स्वागत व वैज्ञानिकों को बहुत-बहुत बधाई। साथ ही, केन्द्र सरकार से विशेष अनुरोध भी है कि देश में सभी स्वास्थ्यकर्मियों के साथ-साथ सर्वसमाज के अति-गरीबों को भी इस टीके की मुफ्त व्यवस्था की जाए तो यह उचित होगा।
— Mayawati (@Mayawati) January 3, 2021
Published On - 4:21 pm, Sun, 3 January 21