AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ರೈತರು ಮತ್ತು ಜನಸಾಮಾನ್ಯರು ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್​ ಪಕ್ಷ ಪದಚ್ಯುತಗೊಂಡು ಎಸ್​ಎಡಿ-ಬಿಎಸ್​ಪಿ ಮೈತ್ರಿ ಕೂಟ ಅಧಿಕಾರಕ್ಕೆ ಬರಬೇಕು: ಮಾಯಾವತಿ

ಒಂದು ಸಂಪೂರ್ಣ ಬಹುಮತದ ಸರ್ಕಾರ ಅಧಿಕಾರಕ್ಕೆ ಬರುವುದನ್ನು ಪಂಜಾಬ್ ಜನ ಖಾತರಿಪಡಿಸಿಕೊಳ್ಳಬೇಕೆಂದು ಮಾಯಾವತಿ ಕರೆ ನೀಡಿದ್ದಾರೆ.

ಪಂಜಾಬ್ ರೈತರು ಮತ್ತು ಜನಸಾಮಾನ್ಯರು ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್​ ಪಕ್ಷ ಪದಚ್ಯುತಗೊಂಡು ಎಸ್​ಎಡಿ-ಬಿಎಸ್​ಪಿ ಮೈತ್ರಿ ಕೂಟ ಅಧಿಕಾರಕ್ಕೆ ಬರಬೇಕು: ಮಾಯಾವತಿ
ಬಿಎಸ್​ಪಿ ನಾಯಕಿ ಮಾಯಾವತಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 03, 2021 | 8:52 PM

Share

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಧುರೀಣೆ ಮಾಯಾವತಿ ಅವರು ಮುಂಬರುವ ಪಂಜಾಬ್ ವಿಧಾನ ಸಭೆ ಚುನಾವಣೆಯಲ್ಲಿ ಅಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕರು ಬಿಎಸ್​ಪಿ–ಶಿರೋಮಣಿ ಅಕಾಲಿ ದಳ (ಎಸ್ಎಡಿ) ಮೈತ್ರಿ ಕೂಟಕ್ಕೆ ವೋಟು ನೀಡಬೇಕೆಂದು ಹೇಳಿದ್ದಾರೆ. ಸರಣಿ ಟ್ವೀಟ್​ಗಳ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರನ್ನು ಟೀಕಿಸಿರುವ ಮಾಯಾವತಿ, ತಮ್ಮ ಒಳಜಗಳಗಳಿಂದಾಗಿ ಅವರು ರಾಜ್ಯದಲ್ಲಿ ಅರಾಜಕತೆಯನ್ನು ಸೃಷ್ಟಿಸಿದ್ದಾರೆ ಮತ್ತು ರಾಜ್ಯದ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

‘ಪಂಜಾಬ್​ನಲ್ಲಿ ಉದ್ಯಮ–ವಹಿವಾಟು, ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ನಿರ್ವಹಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ವಿದ್ಯುಚ್ಛಕ್ತಿ ಬಿಕ್ಕಟ್ಟಿನಿಂದಾಗಿ ಈ ಸಮಸ್ಯೆಗಳು ತಲೆದೋರಿವೆ. ಆದರೆ ಅಧಿಕಾರರೂಢ ಕಾಂಗ್ರೆಸ್ ಪಕ್ಷದ ನಾಯಕರಿಗೆ ಇದ್ಯಾವುದರ ಬಗ್ಗೆ ಚಿಂತೆ ಇಲ್ಲ. ಅವರ ಮಧ್ಯೆ ನಡೆಯುತ್ತಿರುವ ಜಗಳಗಳು ನಗೆಪಾಟಿಲಿಗೀಡಾಗಿವೆ. ಸರ್ಕಾರದಲ್ಲಿ ಎರಡು ಬಣಗಳಾಗಿವೆ. ಪ್ರತಿದಿನ ನಾಯಕರ ನಡುವೆ ಕಾದಾಟ, ಕೆಸರೆರಚಾಟದ ಸುದ್ದಿಗಳು ಹೊರಬರುತ್ತಿವೆ,’ ಎಂದು ಮಾಯಾವತಿ ತಮ್ಮ ಒಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

ಒಂದು ಸಂಪೂರ್ಣ ಬಹುಮತದ ಸರ್ಕಾರ ಅಧಿಕಾರಕ್ಕೆ ಬರುವುದನ್ನು ಪಂಜಾಬ್ ಜನ ಖಾತರಿಪಡಿಸಿಕೊಳ್ಳಬೇಕೆಂದು ಮಾಯಾವತಿ ಕರೆ ನೀಡಿದ್ದಾರೆ.

‘ಪರಿಸ್ಥಿತಿ ಆ ಮಟ್ಟಿಗೆ ಹದಗೆಟ್ಟಿರುವುದರಿಂದ ಪಂಜಾಬ ರಾಜ್ಯದ ಉತ್ತಮ ಭವಿಷ್ಯಕ್ಕೆ ಮತ್ತು ಅಲ್ಲಿನ ಜನರ ಅಭ್ಯುದಯಕ್ಕೆ ಜನರ ಮುಂದಿರುವ ಅಯ್ಕೆ ಎಂದರೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯ್ಯುವುದು ಮತ್ತು ಶೀರೋಮಣಿ ಅಕಾಲಿ ದಳ ಹಾಗೂ ಬಹುಜನ ಸಮಾಜ ಪಕ್ಷ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ಖಾತ್ರಿಪಡಿಸಿಕೊಳ್ಳುವುದು,’ ಎಂದು ಮಾಯಾವತಿ ಹೇಳಿದ್ದಾರೆ.

ಪಂಜಾಬಿನ ಕಾಂಗ್ರೆಸ್​ ಘಟಕದಲ್ಲಿ ಜಗಳಗಳು ನಡೆಯತ್ತಿರುವಂತೆಯೇ ಅವುಗಳನ್ನು ಪರಿಹರಿಸಲು ಮತ್ತು ಗುಂಪುಗಾರಿಕೆಯನ್ನು ತಡೆಯಲು ಪಕ್ಷದ ಹಿರಿಯ ನಾಯಕರು ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿರುವ ತ್ರಿ–ಸದಸ್ಯರ ಸಮಿತಿಯು ಕಳೆದ ಕೆಲ ವಾರಗಳಿಂದ ಹಲವಾರು ಸಭೆಗಳನ್ನು ನಡೆಸಿದ್ದಾರೆ.

ಏತನ್ಮಧ್ಯೆ, ಮಾಯಾವತಿ ಅವರು ಹೇಳಿಕೆಯನ್ನು ಸಮರ್ಥಿಸಿರುವ ಎಸ್​ಎಡಿ ಧುರೀಣ ಸುಖ್ಬೀರ್ ಸಿಂಗ್ ಬಾದಲ್ ಅವರು ಕಾಂಗ್ರೆಸ್​ ನಾಯಕರಿಗೆ, ರಾಜ್ಯದ ರೈತರ ಬಗ್ಗೆಯಾಗಲಿ ಜನಸಾಮಾನ್ಯರ ಬಗ್ಗೆಯಾಗಲೀ ಯಾವುದೇ ಚಿಂತೆಯಿಲ್ಲ ಎಂದು ಹೇಳಿದ್ದಾರೆ.

‘ಕಾಂಗ್ರೆಸ್ ನಾಯಕರಲ್ಲಿ ಭತ್ತ ಬೆಳೆಯುವ ರೈತರು ಪಡುತ್ತಿರುವ ಸಂಕಷ್ಟ ಮತ್ತು ಪದೇಪದೆ ಪವರ್ ಕಟ್​ಗಳಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಕಿಂಚಿತ್ತೂ ಪರಿವೆ ಇಲ್ಲ ಎಂದು ಬೆಹೆನ್ ಜೀ ಮಾಯಾವತಿ ಅವರು ಹೇಳಿರುವುದರಲ್ಲಿ ಅತಿಶಯೋಕ್ತಿ ಏನೂ ಇಲ್ಲ. ಕಾಂಗ್ರೆಸ್ ನಾಯಕರಿಗೆ ಕೇವಲ ತಮ್ಮ ಕಲ್ಯಾಣದ ಬಗ್ಗೆ ಮಾತ್ರ ಯೋಚನೆಯಿದೆ,’ ಎಂದು ಬಾದಲ್​ ಹೇಳಿದ್ದಾರೆ.

ಜೂನ್ 12 ರಂದು ಎಸ್​ಎಡಿ ಮತ್ತು ಬಿಎಸ್​ಪಿ ಮೈತ್ರಿಯನ್ನು ತಮ್ಮ ನಡುವೆ ಮೈತ್ರಿಯನ್ನು ರಚಿಸಿಕೊಂಡಿದ್ದು ಎರಡು ಪಕ್ಷಗಳ ಮಧ್ಯೆ ಅಗಿರುವ ಒಪ್ಪಂದದ ಪ್ರಕಾರ 117 ವಿಧಾನ ಸಭೆಯ ಕ್ಷೇತ್ರಗಳ ಪೈಕಿ ಎಸ್​ಎಡಿ 97 ರಲ್ಲಿ ಸ್ಪರ್ಧಿಸಲಿದೆ ಬಿಎಸ್​ಪಿ 20 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಪಂಜಾಬಿನ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ನವಜೋತ್ ಸಿದ್ಧು ಮತ್ತು ಪ್ರಿಯಾಂಕಾ ನಡುವೆ ಮಾತುಕತೆ ನಡೆದ ನಂತರ ವರಸೆ ಬದಲಿಸಿದ ರಾಹುಲ್ ಪಂಜಾಬಿನ ನಾಯಕನನ್ನು ಮನೆಗೆ ಕರೆಸಿಕೊಂಡರು!

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ