ರ‍್ಯಾಗಿಂಗ್: 3 ಗಂಟೆಗಳ ಕಾಲ ನಿಂತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದುಬಿದ್ದು ಸಾವು

|

Updated on: Nov 18, 2024 | 10:06 AM

ಹಿರಿಯ ವಿದ್ಯಾರ್ಥಿಗಳು ಮಾಡಿದ ರ‍್ಯಾಗಿಂಗ್​ನಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್​ನ ಪಟಾನ್ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ರ‍್ಯಾಗಿಂಗ್​ನಿಂದಾಗಿ ಮೂರು ಗಂಟೆಗಳ ಕಾಲ ಒಂದೇ ಕಡೆ ನಿಂತಿದ್ದ ಕಾರಣ ಅವರು ಸಾವನ್ನಪ್ಪಿದ್ದಾರೆ. ಶನಿವಾರ ಈ ಘಟನೆ ನಡೆದಿದ್ದು, ಕಾಲೇಜು ತನಿಖೆ ಆರಂಭಿಸಿದೆ.

ರ‍್ಯಾಗಿಂಗ್: 3 ಗಂಟೆಗಳ ಕಾಲ ನಿಂತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದುಬಿದ್ದು ಸಾವು
ಸಾಂದರ್ಭಿಕ ಚಿತ್ರ
Image Credit source: Etv Bharat
Follow us on

ಹಿರಿಯ ವಿದ್ಯಾರ್ಥಿಗಳು ಮಾಡಿದ ರ‍್ಯಾಗಿಂಗ್​ನಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.
ಗುಜರಾತ್​ನ ಪಟಾನ್ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ರ‍್ಯಾಗಿಂಗ್​ನಿಂದಾಗಿ ಮೂರು ಗಂಟೆಗಳ ಕಾಲ ಒಂದೇ ಕಡೆ ನಿಂತಿದ್ದ ಕಾರಣ ಸಾವನ್ನಪ್ಪಿದ್ದಾನೆ. ಶನಿವಾರ ಈ ಘಟನೆ ನಡೆದಿದ್ದು, ಕಾಲೇಜು ತನಿಖೆ ಆರಂಭಿಸಿದೆ.

ಅನಿಲ್ ಮೆಥನಿಯಾ ಎಂದು ಗುರುತಿಸಲಾದ 18 ವರ್ಷದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ, ದೀರ್ಘಕಾಲ ನಿಲ್ಲುವಂತೆ ಮಾಡಿದ್ದಕ್ಕೆ ಪ್ರಜ್ಞಾಹೀನನಾಗಿ ಬಿದ್ದಿದ್ದ, ರಾತ್ರಿ ಪಟಾನ್‌ನ ಧಾರ್‌ಪುರದಲ್ಲಿರುವ ಜಿಎಂಇಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಾಸ್ಟೆಲ್‌ನಲ್ಲಿ ಸಾವನ್ನಪ್ಪಿದ್ದಾನೆ. ಮೂರು ಗಂಟೆಗಳ ಕಾಲ ನಿಂತಿದ್ದಕ್ಕೆ ತಲೆತಿರುಗಿ ಬಿದ್ದಿದ್ದ.

ವಿದ್ಯಾರ್ಥಿಯು ಕುಸಿದು ಬಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು, ಆತನನ್ನು ಬದುಕಿಸಲು ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಅದು ಸಾಧ್ಯವಾಗಲಿಲ್ಲ.ಘಟನೆಯ ಕುರಿತು ಕಾಲೇಜಿನ ರ್ಯಾಗಿಂಗ್ ವಿರೋಧಿ ಸಮಿತಿಯಿಂದ ತನಿಖೆ ಆರಂಭಿಸಲಾಗಿದೆ ಎಂದು ಡೀನ್ ಹೇಳಿದ್ದಾರೆ. ಇದರಲ್ಲಿ ಹಿರಿಯ ವಿದ್ಯಾರ್ಥಿಗಳ ಕೈವಾಡ ಸಾಬೀತಾದೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮೊದಲ ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬರ ಪ್ರಕಾರ , ಸುಮಾರು 8 ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು 3 ಗಂಟೆಗಳ ಕಾಲ ನಿಲ್ಲಿಸಿ, ಒಬ್ಬೊಬ್ಬರೇ ತಮ್ಮ ಪರಿಚಯ ಮಾಡಿಕೊಡುವಂತೆ ಒತ್ತಾಯಿಸಿತ್ತು ಎಂದಿದ್ದಾರೆ.

ಕಾಲೇಜು ಹಾಗೂ ಸರ್ಕಾರದಿಂದ ವಿದ್ಯಾರ್ಥಿಯ ಸಾವಿಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಸಂಬಂಧಿ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ