ರಾಜಸ್ಥಾನ: ಹಾಸ್ಟೆಲ್​ನ ಮೂರನೇ ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

|

Updated on: Oct 19, 2023 | 8:19 AM

ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಡುಂಗರ್​ಪುರದಲ್ಲಿ ನಡೆದಿದೆ. ಡುಂಗರ್‌ಪುರ ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಿಂದ ಹಾರಿ ಸುಧನ್ಶಿ ಸಿಂಗ್ (22) ಮೃತಪಟ್ಟಿದ್ದಾರೆ ಎಂದು ಹೆಡ್ ಕಾನ್‌ಸ್ಟೆಬಲ್ ಪೋಪಟ್‌ಲಾಲ್ ತಿಳಿಸಿದ್ದಾರೆ.

ರಾಜಸ್ಥಾನ: ಹಾಸ್ಟೆಲ್​ನ ಮೂರನೇ ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಸಾವು
Follow us on

ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಡುಂಗರ್​ಪುರದಲ್ಲಿ ನಡೆದಿದೆ. ಡುಂಗರ್‌ಪುರ ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಿಂದ ಹಾರಿ ಸುಧನ್ಶಿ ಸಿಂಗ್ (22) ಮೃತಪಟ್ಟಿದ್ದಾರೆ ಎಂದು ಹೆಡ್ ಕಾನ್‌ಸ್ಟೆಬಲ್ ಪೋಪಟ್‌ಲಾಲ್ ತಿಳಿಸಿದ್ದಾರೆ.

ಭರತ್‌ಪುರ ನಿವಾಸಿಯಾಗಿರುವ ಸಿಂಗ್, ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಹಾಸ್ಟೆಲ್ ಕೋಣೆಯಲ್ಲಿ ಒಬ್ಬನೇ ವಾಸವಾಗಿದ್ದ.
ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಮೃತರ ಕುಟುಂಬಸ್ಥರು ಭರತ್‌ಪುರದಿಂದ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಕೋಟದಲ್ಲಿ ಈ ವರ್ಷ 27ಕ್ಕೂ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಸ್ಥಾನದ ಕೋಟದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮೊಹಮ್ಮದ್ ತನ್ವೀರ್ ಎಂದು ಗುರುತಿಸಲಾದ 20 ವರ್ಷದ ಯುವಕ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ವೀರ್ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಮೂಲದವರಾಗಿದ್ದು, ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ತಂದೆಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಸಾವಿನ ನಿಖರವಾದ ಸಂದರ್ಭಗಳು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾನೋ ಇಲ್ಲವೋ ಎಂಬುದು ಕೂಡ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಸ್ಥಳೀಯ ಅಧಿಕಾರಿಗಳಲ್ಲಿ ಕಳವಳವನ್ನು ಉಂಟುಮಾಡಿದೆ.

ಮತ್ತಷ್ಟು ಓದಿ: ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 27ನೇ ಘಟನೆ

ಸೀಲಿಂಗ್ ಫ್ಯಾನ್‌ಗಳಲ್ಲಿ ಆ್ಯಂಟಿ ಹ್ಯಾಂಗಿಂಗ್ ಸಾಧನಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದ್ದಾರೆ. ಎರಡು ತಿಂಗಳ ಅವಧಿಗೆ ಯಾವುದೇ ಪರೀಕ್ಷೆಗಳನ್ನು ನಡೆಸದಂತೆ ತರಬೇತಿ ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ