MCD Elections 2022: ಎಂಸಿಡಿ ಚುನಾವಣೆ ಹಿನ್ನೆಲೆ; ಇಂದು ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ

ಮತದಾನ ಪ್ರಕ್ರಿಯೆಗೆ ಸರ್ಕಾರಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಇಂದು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ದೆಹಲಿಯ ಶಿಕ್ಷಣ ನಿರ್ದೇಶನಾಲಯವು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

MCD Elections 2022: ಎಂಸಿಡಿ ಚುನಾವಣೆ ಹಿನ್ನೆಲೆ; ಇಂದು ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 03, 2022 | 8:26 AM

ನವದೆಹಲಿ: ಡಿ. 4ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ (MCD Election) ನಡೆಯಲಿರುವ ಹಿನ್ನೆಲೆಯಲ್ಲಿ ಇಂದು (ಶನಿವಾರ) ಎಲ್ಲಾ ಸರ್ಕಾರಿ ಶಾಲೆಗಳಿಗೆ ದೆಹಲಿ ಸರ್ಕಾರ (Delhi Government) ರಜೆ ಘೋಷಿಸಿದೆ. ಮತದಾನ ಪ್ರಕ್ರಿಯೆಗೆ ಸರ್ಕಾರಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಇಂದು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ದೆಹಲಿಯ ಶಿಕ್ಷಣ ನಿರ್ದೇಶನಾಲಯವು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಸಂಪೂರ್ಣ ವಿವರಗಳಿಗಾಗಿ ಶಾಲೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ದೆಹಲಿ MCD ಚುನಾವಣೆ 2022ರ ಮತದಾನದ ಸಿದ್ಧತೆಗಾಗಿ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು, ಸಿಬ್ಬಂದಿ ಸದಸ್ಯರು, SMC ಸದಸ್ಯರು ಮತ್ತು ಪೋಷಕರಲ್ಲಿ ಈ ಮಾಹಿತಿಯನ್ನು ಪ್ರಸಾರ ಮಾಡುವಂತೆ ಸೂಚಿಸುವ ಎಲ್ಲಾ ಶಾಲಾ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ: ಎಂಸಿಡಿ ಚುನಾವಣೆಗೆ ಕೇಂದ್ರ ಅಡ್ಡಿ, ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ ಕೇಜ್ರಿವಾಲ್

ಡಿಸೆಂಬರ್ 4 ರಂದು ನಡೆಯಲಿರುವ ಎಂಸಿಡಿ ಚುನಾವಣೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗಿದೆ. ಎಂಸಿಡಿಯ 250 ವಾರ್ಡ್‌ಗಳಿಗೆ ಒಟ್ಟು 13,665 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಎಲ್ಲಾ ಮಾರ್ಗಗಳಲ್ಲಿ ದೆಹಲಿ ಮೆಟ್ರೋ ರೈಲು ಸೇವೆಗಳು ಮತದಾನದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4 ಗಂಟೆಗೆ ಪ್ರಾರಂಭವಾಗುತ್ತವೆ.

ರಾಷ್ಟ್ರೀಯ ಪರೀಕ್ಷಾ ಮಂಡಳಿ, NBE FMGE ಡಿಸೆಂಬರ್ 2022ರ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಅಧಿಕೃತ ವೆಬ್‌ಸೈಟ್ natboard.edu.inನಲ್ಲಿ ಹೊರಡಿಸಲಾದ ಸೂಚನೆಯ ಪ್ರಕಾರ, ದೆಹಲಿ MCD ಚುನಾವಣೆಗಳ ಹಿನ್ನೆಲೆಯಲ್ಲಿ ಡಿಸೆಂಬರ್​​ನ FMGE ಪರೀಕ್ಷೆಯನ್ನು ಈಗ 2023ರ ಜನವರಿಯಲ್ಲಿ ನಡೆಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 am, Sat, 3 December 22