ಭದ್ರತಾ ಸಮಸ್ಯೆ; ಪಂಜಾಬ್ ಸಿಎಂ ಭಗವಂತ್ ಮಾನ್ ಪ್ಯಾರಿಸ್ ಭೇಟಿಗೆ ಅನುಮತಿ ನಿರಾಕರಿಸಿದ ವಿದೇಶಾಂಗ ಸಚಿವಾಲಯ

|

Updated on: Aug 03, 2024 | 3:06 PM

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲಿರುವ ಹಾಕಿ ತಂಡದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಸಿಎಂ ಮಾನ್ ಪ್ಯಾರಿಸ್‌ಗೆ ಭೇಟಿ ನೀಡಬೇಕಿತ್ತು. ಆದರೆ, ಅವರಿಗೆ ಪ್ಯಾರಿಸ್​ಗೆ ಭೇಟಿ ನೀಡಲು ವಿದೇಶಾಂಗ ಸಚಿವಾಲಯ ಅನುಮತಿ ನಿರಾಕರಿಸಿದೆ.

ಭದ್ರತಾ ಸಮಸ್ಯೆ; ಪಂಜಾಬ್ ಸಿಎಂ ಭಗವಂತ್ ಮಾನ್ ಪ್ಯಾರಿಸ್ ಭೇಟಿಗೆ ಅನುಮತಿ ನಿರಾಕರಿಸಿದ ವಿದೇಶಾಂಗ ಸಚಿವಾಲಯ
ಭಗವಂತ್ ಮಾನ್
Follow us on

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪ್ಯಾರಿಸ್ ಪ್ರವಾಸಕ್ಕೆ ರಾಜಕೀಯ ಅನುಮತಿಯನ್ನು ವಿದೇಶಾಂಗ ಸಚಿವಾಲಯ ಇಂದು ನಿರಾಕರಿಸಿದೆ. ಅನುಮತಿ ನಿರಾಕರಿಸಲು ವಿದೇಶಾಂಗ ಸಚಿವಾಲಯ ಭದ್ರತಾ ಕಾರಣಗಳನ್ನು ಉಲ್ಲೇಖಿಸಿದೆ. ಶುಕ್ರವಾರ ಸಂಜೆ ಪಂಜಾಬ್ ಮುಖ್ಯಮಂತ್ರಿಗಳ ಕಚೇರಿಗೆ ಈ ಬಗ್ಗೆ ಮಾಹಿತಿ ಲಭಿಸಿದೆ.

ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಭಗವಂತ್ ಮಾನ್ ಆಗಸ್ಟ್ 4ರಂದು ಭಾರತ ಹಾಕಿ ತಂಡದ ಕ್ವಾರ್ಟರ್‌ಫೈನಲ್ ಪಂದ್ಯಕ್ಕಾಗಿ ಆಗಸ್ಟ್ 3ರಿಂದ 9ರವರೆಗೆ ಪ್ಯಾರಿಸ್‌ಗೆ ಭೇಟಿ ನೀಡಲು ಯೋಜಿಸಲಾಗಿತ್ತು. ಅವರು ತಮ್ಮ ಪ್ಯಾರಿಸ್ ಭೇಟಿಗೆ ರಾಜಕೀಯ ಅನುಮತಿ ಕೋರಿದ್ದರು.

ಅನುಮತಿಯನ್ನು ನಿರಾಕರಿಸುವ ಸಂದರ್ಭದಲ್ಲಿ ಭಗವಂತ್ ಮಾನ್ ಅವರಿಗೆ Z ಪ್ಲಸ್ ಭದ್ರತಾ ರಕ್ಷಣೆ ನೀಡಿರುವುದರಿಂದ ಅವರ ಭದ್ರತೆಯ ಮಟ್ಟವನ್ನು ಇಷ್ಟು ಕಡಿಮೆ ಸಮಯದಲ್ಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆಮ್ ಆದ್ಮಿಗೆ ಮತ್ತೊಂದು ಸಂಕಷ್ಟ; ಮಾಜಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ತನಿಖೆಗೆ ಆದೇಶ

52 ವರ್ಷಗಳ ನಂತರ ಭಾರತ ಹಾಕಿ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 52 ವರ್ಷಗಳ ನಂತರ ಭಾರತ ಹಾಕಿ ತಂಡ ಸೋಲಿಸುವ ಮೂಲಕ ದಾಖಲೆಯ ಗೆಲುವು ದಾಖಲಿಸಿದೆ. ಭಾರತವು 1972ರ ನಂತರದ ಅಸಾಧಾರಣ ಪ್ರತಿಸ್ಪರ್ಧಿ ವಿರುದ್ಧದ ಮೊದಲ ಒಲಂಪಿಕ್ ಗೆಲುವಿನಲ್ಲಿ ಆಸ್ಟ್ರೇಲಿಯಾವನ್ನು 3-2 ಅಂತರದಿಂದ ಸೋಲಿಸಿತು. ಭಗವಂತ್ ಮಾನ್ ಶುಕ್ರವಾರ ಭಾರತೀಯ ಹಾಕಿ ತಂಡವನ್ನು ಅಭಿನಂದಿಸಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಒಳ್ಳೆ ಕೆಲಸ ಮಾಡಿದ ಆಮ್ ಆದ್ಮಿ ಸಚಿವರನ್ನು ಬಿಜೆಪಿ ಜೈಲಿಗೆ ತಳ್ಳಿದೆ; ಸಿಎಂ ಭಗವಂತ್ ಮಾನ್ ಆರೋಪ

52 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ ಎಂದು ಸಿಎಂ ಮಾನ್ ಸಂದೇಶದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಭಾರತವು ಆಸ್ಟ್ರೇಲಿಯಾವನ್ನು 3-2 ಅಂತರದಿಂದ ಸೋಲಿಸಿದ್ದು ಅತ್ಯಂತ ಹೆಮ್ಮೆ ಮತ್ತು ತೃಪ್ತಿಯ ವಿಷಯವಾಗಿದೆ. ಹರ್ಮನ್‌ಪ್ರೀತ್ ಸಿಂಗ್ ಈ ಮಹತ್ವದ ಪಂದ್ಯದಲ್ಲಿ ಎರಡು ಗೋಲುಗಳನ್ನು ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು” ಎಂದು ಭಗವಂತ್ ಮಾನ್ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಗೆಲುವಿನಿಂದ ಇಡೀ ತಂಡ ಇಡೀ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ