ದೆಹಲಿ ಫೆಬ್ರವರಿ 29: ವಿದೇಶಿ ಪ್ರಜೆಯೊಬ್ಬರಿಗೆ ದೇಶಕ್ಕೆ ಪ್ರವೇಶ ನೀಡುವುದು ಸಾರ್ವಭೌಮ ನಿರ್ಧಾರ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಗುರುವಾರ ಹೇಳಿದ್ದಾರೆ. ಯುಕೆ ಲೇಖಕಿ ನಿತಾಶಾ ಕೌಲ್ (Nitasha Kaul) ಅವರಿಗೆ ದೇಶಕ್ಕೆ ಏಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ. ಯುಕೆಯಲ್ಲಿರುವ ಕಾಶ್ಮೀರಿ ಮೂಲದ ಲೇಖಕಿ ಭಾರತಕ್ಕ ಬಂದಾಗ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ತನಗಾದ ಕಷ್ಟವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ವಿವರಿಸಿದ್ದಾರೆ. ಕರ್ನಾಟಕ ಸರ್ಕಾರವು ಸೆಮಿನಾರ್‌ಗೆ ಆಹ್ವಾನಿಸಿದ್ದರೂ ಪ್ರವೇಶ ನಿರಾಕರಿಸಲಾಯಿತು. ಈ ಆದೇಶವು ನವದೆಹಲಿಯಿಂದ ಬಂದಿದೆ ಮತ್ತು ಆರ್‌ಎಸ್‌ಎಸ್ ವಿರುದ್ಧದ ತನ್ನ ಹಿಂದಿನ ಲೇಖನಗಳನ್ನು ಆಧರಿಸಿದೆ ಎಂದು ಕೌಲ್ ಹೇಳಿದ್ದಾರೆ. ಬಿಜೆಪಿ ನಾಯಕರು ನಿತಾಶಾ ಕೌಲ್ ಅವರು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದ್ದು ಭಾರತ ವಿರೋಧಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರ (ಕಾಂಗ್ರೆಸ್ ಆಡಳಿತದ ರಾಜ್ಯ) ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಯಿತು ಆದರೆ ಕೇಂದ್ರ ಸರ್ಕಾರ ನನಗೆ ಪ್ರವೇಶವನ್ನು ನಿರಾಕರಿಸಿತು. ನನ್ನ ಎಲ್ಲಾ ದಾಖಲೆಗಳು ಯುಕೆ ಪಾಸ್‌ಪೋರ್ಟ್ ಮತ್ತು ಒಸಿಐ ಮಾನ್ಯ ಮತ್ತು ಇತ್ತೀಚಿನದ್ದು ಎಂದು ನಿತಾಶಾ ಎಕ್ಸ್‌ನಲ್ಲಿ ಬರೆದಿದ್ದಾರೆ.
How can the world’s largest democracy be threatened by my pen & the word? How is it ok for centre to not allow a professor to be at a conference on Constitution where she was invited by state govt? To give no reason? Not the India we cherish, is it?@CMofKarnataka @CMahadevappa…
— Professor Nitasha Kaul, PhD (@NitashaKaul) February 25, 2024
ನಿತಾಶಾ ಕೌಲ್ ಅವರನ್ನು ಆಹ್ವಾನಿಸಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿರುವ ಕರ್ನಾಟಕ ವಿಎಚ್‌ಪಿ ನಾಯಕ ಗಿರೀಶ್ ಭಾರದ್ವಾಜ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ನಿತಾಶಾ ಕೌಲ್ ಅವರ ಒಸಿಐ ಕಾರ್ಡ್ ಅನ್ನು ರದ್ದುಗೊಳಿಸುವಂತೆ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. “ನಮ್ಮ ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾದ ದುರುದ್ದೇಶಪೂರಿತ ಅಜೆಂಡಾದೊಂದಿಗೆ ಅವರು ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಾಳೆ. ಭಾರತದಲ್ಲಿನ ಯಾವುದೇ ಕಾರ್ಯಕ್ರಮಗಳಿಗೆ ಡಾ ಕೌಲ್ ಅವರನ್ನು ಅತಿಥಿಯಾಗಿ ಆಹ್ವಾನಿಸುವುದನ್ನು ತಡೆಯಲು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು” ಎಂದು ಭಾರದ್ವಾಜ್ ಬರೆದಿದ್ದಾರೆ.
ಇದನ್ನೂ ಓದಿ: ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ ಅನುದಾನ; ಕೇಂದ್ರ ಸಂಪುಟ ಒಪ್ಪಿಗೆ; ಒಂದು ಕೋಟಿ ಮನೆಗಳಿಗೆ ಸೋಲಾರ್ ಗುರಿ
“ಈ ನಿರ್ದಿಷ್ಟ ಯುಕೆ ಪ್ರಜೆ (ನಿತಾಶಾ ಕೌಲ್) ಫೆಬ್ರವರಿ 22 ರಂದು ಭಾರತಕ್ಕೆ ಬಂದಿದ್ದಾರೆ. ನಿಮಗೆ ತಿಳಿದಿರುವಂತೆ, ನಮ್ಮ ದೇಶಕ್ಕೆ ವಿದೇಶಿ ಪ್ರಜೆಗಳ ಪ್ರವೇಶವು ಸಾರ್ವಭೌಮ ನಿರ್ಧಾರವಾಗಿದೆ” ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:51 pm, Thu, 29 February 24