ಮಾಧ್ಯಮಗಳ ವರ್ತನೆ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ: ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕುರಿತು ಅಸತ್ಯ ಹಾಗೂ ಅಸಹನೀಯ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಆರೋಪಿಸಿ ಅವರ ಮಗ ಅಭಿಜಿತ್ ಮುಖರ್ಜಿ ಕಿಡಿ ಕಾರಿದ್ದಾರೆ. “ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ದೇಹದಲ್ಲಿ ಹೃದಯದಿಂದ ಮೆದುಳಿಗೆ ರಕ್ತ ಪರಿಚಲನೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಅವರ ಆರೋಗ್ಯದ ಬಗ್ಗೆ ಕೆಲವು ಪ್ರತಿಷ್ಠಿತ ಪತ್ರಕರ್ತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಳ್ಳುತ್ತಿರುವ ಮತ್ತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳು, ಭಾರತದ ಮಾಧ್ಯಮ […]
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕುರಿತು ಅಸತ್ಯ ಹಾಗೂ ಅಸಹನೀಯ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಆರೋಪಿಸಿ ಅವರ ಮಗ ಅಭಿಜಿತ್ ಮುಖರ್ಜಿ ಕಿಡಿ ಕಾರಿದ್ದಾರೆ.
“ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ದೇಹದಲ್ಲಿ ಹೃದಯದಿಂದ ಮೆದುಳಿಗೆ ರಕ್ತ ಪರಿಚಲನೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಅವರ ಆರೋಗ್ಯದ ಬಗ್ಗೆ ಕೆಲವು ಪ್ರತಿಷ್ಠಿತ ಪತ್ರಕರ್ತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಳ್ಳುತ್ತಿರುವ ಮತ್ತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳು, ಭಾರತದ ಮಾಧ್ಯಮ ಅಸತ್ಯ ಸುದ್ದಿಗಳ ಕಾರ್ಖಾನೆಯಾಗಿದೆ ಎನ್ನುವುದನ್ನು ಪ್ರತಿಬಿಂಬಿಸುತ್ತದೆ@ABHIJIT_LS,” ಎಂದು ಹೇಳಿದ್ದಾರೆ.
ಮುಂದುವರಿದು ಹೇಳಿರುವ ಆಭಿಜಿತ್, ಕೇವಲ ಪ್ರಚಾರಕ್ಕಾಗಿ ಮತ್ತು ಟಿಆರ್ಪಿಗಾಗಿ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುವುದನ್ನು ನೋಡುತ್ತಿದ್ದರೆ ನಾಚಿಕೆಯಿಂದ ತಲೆತಗ್ಗಿಸುವಂತಾಗುತ್ತದೆ ಎಂದಿದ್ದಾರೆ.
“ಕೇವಲ ಪ್ರಚಾರ ಗಿಟ್ಟಿಸಲು, ಕೆಲವು ಸುದ್ದಿ ಮಾಧ್ಯಮಗಳು, ಪತ್ರಕರ್ತರು, ಸಾಮಾಜಿಕ ಜಾಲತಾಣಗಳು ಉದ್ದೇಶಪೂರ್ವಕವಾಗಿ ಮತ್ತು ಹತಾಷೆಯಿಂದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದನ್ನು ನೋಡುತ್ತಿದ್ದರೆ, ನಾಚಿಕೆಯಿಂದ ತಲೆ ತಾನಾಗೇ ತಗ್ಗುತ್ತದೆ! ಚಿಟಿಕೆ ಹೊಡೆಯುವಷ್ಟರಲ್ಲಿ ಬದುಕಿರುವ ವ್ಯಕ್ತಿಯನ್ನು ಸಾಯಿಸಿಬಿಡುವ ಅವರ ಕೀಳು ಮನಸ್ಥಿತಿ ಹೇವರಿಕೆ ಹುಟ್ಟಿಸುತ್ತದೆ@ABHIJIT_LS,” ಅಂತ ಹೇಳಿದ್ದಾರೆ.