ವೈದ್ಯಕೀಯ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಲ್ಲಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ವೃದ್ಧ ದಂಪತಿಯನ್ನು ನೋಡಿಕೊಳ್ಳಲು ಆಕೆಯನ್ನು ನೇಮಿಸಲಾಗಿತ್ತು, ಆ ದಂಪತಿಯ ಮಗ ವಿದೇಶದಲ್ಲಿ ವಾಸವಾಗಿದ್ದ. ಇಲ್ಲಿ ಯಾರೂ ನೋಡಿಕೊಳ್ಳಲು ಇಲ್ಲ ಎಂದು ಆಕೆಯನ್ನು ನೇಮಿಸಲಾಗಿತ್ತು.
ಮೃತಳ ಕುಟುಂಬ ಸದಸ್ಯರು ಯಾವುದೇ ದೂರು ದಾಖಲಿಸಿಲ್ಲ. ಅವರ ದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಘಟನೆ
ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ವರದಿಯಾಗಿದೆ.
ಮತ್ತಷ್ಟು ಓದಿ:
ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ
ತೀವ್ರವಾಗಿ ಗಾಯಗೊಂಡಿದ್ದ ಪ್ರೇಮಾಳನ್ನು ಕೂಡಲೇ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ನಹೀಮ್, ರಘು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯ ಸಾವಿನ ಸುದ್ದಿಯನ್ನು ಕಾಲೇಜು ಆಡಳಿತ ಮಂಡಳಿ ಪೋಷಕರಿಗೆ ತಿಳಿಸಿದ್ದು, ಆಸ್ಪತ್ರೆಗೆ ಆಗಮಿಸಿದ ಪ್ರೇಮಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರಥಮ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಪ್ರೇಮಾ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ