AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಆಸ್ಪತ್ರೆಯ ಆವರಣಕ್ಕೆ ಎಳೆದೊಯ್ದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ(Rape)ವೆಸಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇದು 2024 ರ ಆರ್‌ಜಿ ಕರ್ ಪ್ರಕರಣದಲ್ಲಿ ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ನೆನಪಿಸುತ್ತದೆ. ಒಡಿಶಾದ ಜಲೇಶ್ವರ ಮೂಲದ ಸಂತ್ರಸ್ತೆ, ಕೋಲ್ಕತ್ತಾದಿಂದ 170 ಕಿ.ಮೀ ದೂರದಲ್ಲಿರುವ ಪಶ್ಚಿಮ ಬಂಗಾಳದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾಳೆ.

ಪಶ್ಚಿಮ ಬಂಗಾಳದ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Oct 11, 2025 | 12:17 PM

Share

ಕೋಲ್ಕತ್ತಾ, ಅಕ್ಟೋಬರ್ 11: ಆಸ್ಪತ್ರೆಯ ಆವರಣಕ್ಕೆ ಎಳೆದೊಯ್ದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ(Rape)ವೆಸಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇದು 2024 ರ ಆರ್‌ಜಿ ಕರ್ ಪ್ರಕರಣದಲ್ಲಿ ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ನೆನಪಿಸುತ್ತದೆ. ಒಡಿಶಾದ ಜಲೇಶ್ವರ ಮೂಲದ ಸಂತ್ರಸ್ತೆ, ಕೋಲ್ಕತ್ತಾದಿಂದ 170 ಕಿ.ಮೀ ದೂರದಲ್ಲಿರುವ ಪಶ್ಚಿಮ ಬಂಗಾಳದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾಳೆ.

ಮೂಲಗಳು ತಿಳಿಸಿರುವ ಪ್ರಕಾರ, ವಿದ್ಯಾರ್ಥಿನಿ ಶುಕ್ರವಾರ ರಾತ್ರಿ 8.30ಕ್ಕೆ ಪುರುಷ ಸ್ನೇಹಿತನೊಂದಿಗೆ ಕ್ಯಾಂಪಸ್‌ನಿಂದ ಹೊರಬಂದಿದ್ದಳು. ಆಕೆ ಹಿಂತಿರುಗುತ್ತಿದ್ದಾಗ, ಒಬ್ಬ ವ್ಯಕ್ತಿ ಆಕೆಯನ್ನು ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮತ್ತು ಮಹಿಳೆಯ ಜೊತೆಗಿದ್ದ ಸ್ನೇಹಿತ ಸೇರಿದಂತೆ ಇತರ ವ್ಯಕ್ತಿಗಳನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ತಂದೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತನ್ನ ಮಗಳು ತನ್ನ ಗೆಳೆಯನೊಂದಿಗೆ ಗೋಲ್ಗಪ್ಪಾ ತಿನ್ನಲು ಹೋಗಿದ್ದಾಗ, ಮತ್ತೊಬ್ಬ ವ್ಯಕ್ತಿ ಅವಳನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಮತ್ತಷ್ಟು ಓದಿ: ಅತ್ಯಾಚಾರ ಪ್ರಕರಣ, ವ್ಯಕ್ತಿ 51 ದಿನ ಜೈಲು ಶಿಕ್ಷೆ ಅನುಭವಿಸಿದ ಮೇಲೆ ದೂರು ಕೊಟ್ಟಿದ್ದೇ ನೆನಪಿಲ್ಲ ಎಂದ ಮಹಿಳೆ

ಪೊಲೀಸರು ಈ ಪ್ರಕರಣದ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಘಟನೆ ಬಗ್ಗೆ ಸರಿಯಾದ ಮಾಹಿತಿ ಪೊಲೀಸರು ಬಹು ಕೋನಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 2024ರಲ್ಲಿ ಆರ್​ಜಿಕರ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಬಳಿಕ ಓರ್ವನನ್ನು ಬಂಧಿಸಲಾಗಿತ್ತು.

ಅತ್ಯಾಚಾರ ಪ್ರಕರಣ, ವ್ಯಕ್ತಿ 51 ದಿನ ಜೈಲು ಶಿಕ್ಷೆ ಅನುಭವಿಸಿದ ಮೇಲೆ ದೂರು ಕೊಟ್ಟಿದ್ದೇ ನೆನಪಿಲ್ಲ ಎಂದ ಮಹಿಳೆ ಐದು ವರ್ಷಗಳ ಹಿಂದಿನ ಅತ್ಯಾಚಾರ(Rape) ಪ್ರಕರಣವು ಅಂತೂ ಈ ವರ್ಷ ಇತ್ಯರ್ಥಗೊಂಡಿದೆ. ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಅಂದು ಗೋಗರೆಯುತ್ತಾ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಇಂದು ನಾನು ದೂರು ಕೊಟ್ಟಿದ್ದೀನಾ ನೆನಪೇ ಇಲ್ಲ ಎಂದಿದ್ದಾಳೆ. ಈ ಹೇಳಿಕೆಯು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಐದು ವರ್ಷಗಳ ಹಿಂದೆ 2020ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಘಟನೆ. ಕೋಲ್ಕತ್ತಾದ ವ್ಯಕ್ತಿಯೊಬ್ಬರ ಮೇಲೆ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದ್ದರು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.

ಆ ವ್ಯಕ್ತಿ 51 ದಿನಗಳ ಕಾಲ ಜೈಲು ಶಿಕ್ಷೆ ಕೂಡ ಅನುಭವಿಸಿದ್ದರು. ಆದರೆ ಈಗ ತಪ್ಪು ತಿಳುವಳಿಕೆಯಿಂದಾಗಿ ತಾನು ಎಫ್‌ಐಆರ್ ದಾಖಲಿಸಿರುವುದಾಗಿ ಮಹಿಳೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಸುಮ್ಮನೆ 51 ದಿನಗಳನ್ನು ಜೈಲಿನಲ್ಲಿ ಕಳೆಯಬೇಕಾಯಿತು. ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾದ ಕಾರಣ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ