Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ

ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಿಕಂದರಾಬಾದ್​ನಲ್ಲಿ ನಡೆದಿದೆ.

Telangana: ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ
ಪೊಲೀಸ್Image Credit source: India Today
Follow us
ನಯನಾ ರಾಜೀವ್
|

Updated on: Jul 11, 2023 | 8:16 AM

ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಿಕಂದರಾಬಾದ್​ನಲ್ಲಿ ನಡೆದಿದೆ. ವಿದ್ಯಾರ್ಥಿ ಕಳೆದ ನಾಲ್ಕು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದ್ದು, ಭಾನುವಾರ ಲೇಸರ್ ಬ್ಲೇಡ್ ಬಳಸಿ ಶಿಶ್ನವನ್ನು ಕತ್ತರಿಸುವ ಮೂಲಕ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾನೆ.

ರೆಡ್ಡಿ ಅವರು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಕಳೆದ ಎರಡು ಮೂರು ತಿಂಗಳುಗಳಲ್ಲಿ ಆತ ಔಷಧಿ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದ ಎನ್ನಲಾಗಿದೆ, ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಮತ್ತಷ್ಟು ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ