AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿ ಕೀ ದುಖಾನ್’ ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸಿ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನ ದೇಶಾದ್ಯಂತ ಚಾಲ್ತಿಯಲ್ಲಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನವಾಗಿದೆ.

'ಮೋದಿ ಕೀ ದುಖಾನ್' ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 7:21 PM

Share

ದೆಹಲಿ: ಮೇಡ್ ಇನ್ ಇಂಡಿಯಾ (Made in India) ‘ಸ್ವದೇಶಿ’ ಲಸಿಕೆಗಳು ನಮ್ಮ ದೇಶಕ್ಕೆ ಮತ್ತು ವಿಶ್ವದ ಇತರ ದೇಶಗಳಿಗೆ ನೀಡುವಷ್ಟು ಇದೆ. ಕೊವಿಡ್-19 ಲಸಿಕೆ ವಿತರಣೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೂಡ 250 ರೂಪಾಯಿಗೆ ಕೊರೊನಾ ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ನಾನು ಕೂಡ ಕೊವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಜನೌಷಧ ದಿನಾಚರಣೆಯ ಅಂಗವಾಗಿ ಇಂದು (ಮಾರ್ಚ್ 7) ಪ್ರಧಾನಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಔಷಧಗಳು ದುಬಾರಿಯಾಗಿವೆ. ಅದಕ್ಕಾಗಿಯೇ ನಮ್ಮಲ್ಲಿ ಪ್ರಧಾನ ಮಂತ್ರಿ ಜನೌಷಧಿ ಯೋಜನೆ ಇದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ಸಹಕಾರಿಯಾಗಿದೆ. ‘ಮೋದಿ ಕಿ ದುಖಾನ್’ ಎಂದು ಕರೆಯಲ್ಪಡುವ ಈ ಔಷಧ ಮಳಿಗೆಗಳಲ್ಲಿಯೇ ಔಷಧಿ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. 75 ಆಯುಷ್ ಔಷಧಗಳನ್ನು ದೇಶಾದ್ಯಂತ ಇರುವ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವಂತೆ ಮಾಡಲು ನಿರ್ಧಾರ ಮಾಡಿರುವುದಾಗಿ ಮೋದಿ ಹೇಳಿದರು. ಈ ವೇಳೆ, ಶಿಲ್ಲಾಂಗ್​ನಲ್ಲಿ 7500ನೇ ಜನೌಷಧಿ ಕೇಂದ್ರವನ್ನು ಮೋದಿ ಉದ್ಘಾಟಿಸಿದರು.

11 ಕೋಟಿಗೂ ಅಧಿಕ ಸ್ಯಾನಿಟರಿ ನ್ಯಾಪ್​ಕಿನ್​ಗಳು ಜನೌಷಧಿ ಕೇಂದ್ರಗಳಲ್ಲಿ ಮಾರಾಟವಾಗಿದೆ. ಸ್ಯಾನಿಟರಿ ಪ್ಯಾಡ್​ಗಳು ಜನೌಷಧಿ ಕೇಂದ್ರದಲ್ಲಿ 2.5 ರೂಪಾಯಿಗೆ ಸಿಗುತ್ತದೆ. ‘ಜನೌಷಧ ಜನನಿ’ ಯೋಜನೆಯ ಮೂಲಕ ಬಸುರಿ ಹೆಂಗಸರಿಗೂ ವಿವಿಧ ವಸ್ತುಗಳನ್ನು ನೀಡಲಾಗುತ್ತಿದೆ. 1000ದಷ್ಟು ಜನೌಷಧ ಕೇಂದ್ರಗಳನ್ನು ಮಹಿಳೆಯರು ನಡೆಸುತ್ತಿದ್ದಾರೆ. ಆ ಮೂಲಕ, ಜನೌಷಧ ಯೋಜನೆಯು ಮಹಿಳಾ ಸಬಲೀಕರಣಕ್ಕೂ ಸಹಕಾರ ನೀಡಿದೆ ಎಂದು ಮೋದಿ ವಿವರಿಸಿದರು.

ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನ ದೇಶಾದ್ಯಂತ ಚಾಲ್ತಿಯಲ್ಲಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನವಾಗಿದೆ. ಇದರಿಂದ ಯುವ ಸಮುದಾಯಕ್ಕೆ ಉದ್ಯೋಗ ಅವಕಾಶಗಳು ಕೂಡ ಲಭಿಸಿವೆ ಎಂದು ನರೇಂದ್ರ ಮೋದಿ ತಿಳಿಸಿದರು.

ಸಂವಾದದಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗಿ ಜನೌಷಧ ದಿನಾಚರಣೆ ಪ್ರಯುಕ್ತ ಇಂದು (ಮಾರ್ಚ್ 7) ದೇಶದ ನಾಲ್ಕು ಭಾಗಗಳ ಜನೌಷಧ ಕೇಂದ್ರದ ಮಾಲೀಕರು ಮತ್ತು ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಸಂವಾದದಲ್ಲಿ, ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗವಹಿಸಿದರು. ಜನೌಷಧಿ ಕೇಂದ್ರಗಳನ್ನು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾಕ್ಟರ್ ಪದ್ಮನಾಭ ಕಾಮತ್ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂವಾದದಲ್ಲಿ ಮಾತನಾಡಿದ ಮಂಗಳೂರಿನ ಖ್ಯಾತ ಹೃದಯ ವೈದ್ಯ ಡಾ. ಪದ್ಮನಾಭ ಕಾಮತ್, ಮೂರು ವರ್ಷದಿಂದ ಜನೌಷಧಿ ಅಭಿಯಾನದಲ್ಲಿ ಭಾಗಿಯಾಗಿದ್ದೇನೆ. ಗ್ರಾಮೀಣ ಭಾಗದ ಬಡಜನರಿಗೆ ಹೃದಯಾಘಾತ ಆಗುತ್ತಿತ್ತು. ಅವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ಕಷ್ಟ ಆಗುತ್ತಿತ್ತು. ಹಾಗಾಗಿ ಜನೌಷಧಿ ಕೇಂದ್ರದಲ್ಲಿ ಇಸಿಜಿ ಯಂತ್ರ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಜನೌಷಧ ದಿನಾಚರಣೆ: ಮಂಗಳೂರು ವೈದ್ಯ ಡಾ. ಪದ್ಮನಾಭ್ ಕಾಮತ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತು 

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Published On - 12:55 pm, Sun, 7 March 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ