‘ಮೋದಿ ಕೀ ದುಖಾನ್’ ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸಿ: ಪ್ರಧಾನಿ ನರೇಂದ್ರ ಮೋದಿ

| Updated By: ganapathi bhat

Updated on: Apr 06, 2022 | 7:21 PM

ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನ ದೇಶಾದ್ಯಂತ ಚಾಲ್ತಿಯಲ್ಲಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನವಾಗಿದೆ.

ಮೋದಿ ಕೀ ದುಖಾನ್ ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Follow us on

ದೆಹಲಿ: ಮೇಡ್ ಇನ್ ಇಂಡಿಯಾ (Made in India) ‘ಸ್ವದೇಶಿ’ ಲಸಿಕೆಗಳು ನಮ್ಮ ದೇಶಕ್ಕೆ ಮತ್ತು ವಿಶ್ವದ ಇತರ ದೇಶಗಳಿಗೆ ನೀಡುವಷ್ಟು ಇದೆ. ಕೊವಿಡ್-19 ಲಸಿಕೆ ವಿತರಣೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೂಡ 250 ರೂಪಾಯಿಗೆ ಕೊರೊನಾ ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ನಾನು ಕೂಡ ಕೊವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಜನೌಷಧ ದಿನಾಚರಣೆಯ ಅಂಗವಾಗಿ ಇಂದು (ಮಾರ್ಚ್ 7) ಪ್ರಧಾನಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಔಷಧಗಳು ದುಬಾರಿಯಾಗಿವೆ. ಅದಕ್ಕಾಗಿಯೇ ನಮ್ಮಲ್ಲಿ ಪ್ರಧಾನ ಮಂತ್ರಿ ಜನೌಷಧಿ ಯೋಜನೆ ಇದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ಸಹಕಾರಿಯಾಗಿದೆ. ‘ಮೋದಿ ಕಿ ದುಖಾನ್’ ಎಂದು ಕರೆಯಲ್ಪಡುವ ಈ ಔಷಧ ಮಳಿಗೆಗಳಲ್ಲಿಯೇ ಔಷಧಿ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. 75 ಆಯುಷ್ ಔಷಧಗಳನ್ನು ದೇಶಾದ್ಯಂತ ಇರುವ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವಂತೆ ಮಾಡಲು ನಿರ್ಧಾರ ಮಾಡಿರುವುದಾಗಿ ಮೋದಿ ಹೇಳಿದರು. ಈ ವೇಳೆ, ಶಿಲ್ಲಾಂಗ್​ನಲ್ಲಿ 7500ನೇ ಜನೌಷಧಿ ಕೇಂದ್ರವನ್ನು ಮೋದಿ ಉದ್ಘಾಟಿಸಿದರು.

11 ಕೋಟಿಗೂ ಅಧಿಕ ಸ್ಯಾನಿಟರಿ ನ್ಯಾಪ್​ಕಿನ್​ಗಳು ಜನೌಷಧಿ ಕೇಂದ್ರಗಳಲ್ಲಿ ಮಾರಾಟವಾಗಿದೆ. ಸ್ಯಾನಿಟರಿ ಪ್ಯಾಡ್​ಗಳು ಜನೌಷಧಿ ಕೇಂದ್ರದಲ್ಲಿ 2.5 ರೂಪಾಯಿಗೆ ಸಿಗುತ್ತದೆ. ‘ಜನೌಷಧ ಜನನಿ’ ಯೋಜನೆಯ ಮೂಲಕ ಬಸುರಿ ಹೆಂಗಸರಿಗೂ ವಿವಿಧ ವಸ್ತುಗಳನ್ನು ನೀಡಲಾಗುತ್ತಿದೆ. 1000ದಷ್ಟು ಜನೌಷಧ ಕೇಂದ್ರಗಳನ್ನು ಮಹಿಳೆಯರು ನಡೆಸುತ್ತಿದ್ದಾರೆ. ಆ ಮೂಲಕ, ಜನೌಷಧ ಯೋಜನೆಯು ಮಹಿಳಾ ಸಬಲೀಕರಣಕ್ಕೂ ಸಹಕಾರ ನೀಡಿದೆ ಎಂದು ಮೋದಿ ವಿವರಿಸಿದರು.

ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನ ದೇಶಾದ್ಯಂತ ಚಾಲ್ತಿಯಲ್ಲಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನವಾಗಿದೆ. ಇದರಿಂದ ಯುವ ಸಮುದಾಯಕ್ಕೆ ಉದ್ಯೋಗ ಅವಕಾಶಗಳು ಕೂಡ ಲಭಿಸಿವೆ ಎಂದು ನರೇಂದ್ರ ಮೋದಿ ತಿಳಿಸಿದರು.

ಸಂವಾದದಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗಿ
ಜನೌಷಧ ದಿನಾಚರಣೆ ಪ್ರಯುಕ್ತ ಇಂದು (ಮಾರ್ಚ್ 7) ದೇಶದ ನಾಲ್ಕು ಭಾಗಗಳ ಜನೌಷಧ ಕೇಂದ್ರದ ಮಾಲೀಕರು ಮತ್ತು ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಸಂವಾದದಲ್ಲಿ, ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗವಹಿಸಿದರು. ಜನೌಷಧಿ ಕೇಂದ್ರಗಳನ್ನು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾಕ್ಟರ್ ಪದ್ಮನಾಭ ಕಾಮತ್ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂವಾದದಲ್ಲಿ ಮಾತನಾಡಿದ ಮಂಗಳೂರಿನ ಖ್ಯಾತ ಹೃದಯ ವೈದ್ಯ ಡಾ. ಪದ್ಮನಾಭ ಕಾಮತ್, ಮೂರು ವರ್ಷದಿಂದ ಜನೌಷಧಿ ಅಭಿಯಾನದಲ್ಲಿ ಭಾಗಿಯಾಗಿದ್ದೇನೆ. ಗ್ರಾಮೀಣ ಭಾಗದ ಬಡಜನರಿಗೆ ಹೃದಯಾಘಾತ ಆಗುತ್ತಿತ್ತು. ಅವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ಕಷ್ಟ ಆಗುತ್ತಿತ್ತು. ಹಾಗಾಗಿ ಜನೌಷಧಿ ಕೇಂದ್ರದಲ್ಲಿ ಇಸಿಜಿ ಯಂತ್ರ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಜನೌಷಧ ದಿನಾಚರಣೆ: ಮಂಗಳೂರು ವೈದ್ಯ ಡಾ. ಪದ್ಮನಾಭ್ ಕಾಮತ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತು 

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Published On - 12:55 pm, Sun, 7 March 21