ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿ-ರಾಕೇಶ್​ ಟಿಕಾಯತ್​ ಸಭೆ; ಎಲ್ಲ ಸಮಸ್ಯೆಗಳಿಗೂ ಕೇಂದ್ರ ಸರ್ಕಾರವೇ ಮೂಲವೆಂದ ದೀದಿ

ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ. ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ.

ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿ-ರಾಕೇಶ್​ ಟಿಕಾಯತ್​ ಸಭೆ; ಎಲ್ಲ ಸಮಸ್ಯೆಗಳಿಗೂ ಕೇಂದ್ರ ಸರ್ಕಾರವೇ ಮೂಲವೆಂದ ದೀದಿ
ಮಮತಾ ಬ್ಯಾನರ್ಜಿ ಮತ್ತು ರಾಕೇಶ್​ ಟಿಕಾಯತ್​ ಸಭೆ
Follow us
TV9 Web
| Updated By: Lakshmi Hegde

Updated on: Jun 09, 2021 | 5:46 PM

ದೆಹಲಿ: ಕೇಂದ್ರದ ಮೂರು ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ನನ್ನ ಬೆಂಬಲ ಸದಾ ಇದೆ ಎಂದು ತೃಣಮೂಲ ಕಾಂಗ್ರೆಸ್​ ಮುಖ್ಯಸ್ಥೆ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ನಾವು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿದ್ದೇವೆ. ರೈತರೊಂದಿಗೆ ಸದಾ ಇರುತ್ತೇವೆ. ರೈತರ ಬೇಡಿಕೆ ಈಡೇರುವವರೆಗೂ ಅವರ ಪ್ರತಿಭಟನೆಗೆ ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇಂದು ರೈತ ಮುಖಂಡ ರಾಕೇಶ್​ ಟಿಕಾಯತ್​ ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದಾರೆ. ಕೇಂದ್ರದ ವಿರುದ್ಧದ ಪ್ರತಿಭಟನೆಯನ್ನು ತೀವ್ರಗೊಳಿಸುವ ಸಂಬಂಧ ಯೋಜನೆ ರೂಪಿಸಲು ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿಕ್ಷಣ, ಆರೋಗ್ಯ, ಸ್ಥಳೀಯ ರೈತರ ಹಿತದ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಈಗ ಕೈಗಾರಿಕೆಗಳು ಸಂಕಷ್ಟದಲ್ಲಿವೆ. ಔಷಧಗಳ ಮೇಲೆಯೂ ಜಿಎಸ್​ಟಿ ವಿಧಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರೈತರು ಪ್ರತಿಭಟನೆ ನಡೆಸಲು ಶುರುಮಾಡಿ ಏಳು ತಿಂಗಳಾದವು. ಆದರೂ ಕೇಂದ್ರ ಸರ್ಕಾರ ಅವರೊಂದಿಗೆ ಸರಿಯಾಗಿ ಮಾತುಕತೆ ನಡೆಸಿ, ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳೂ ಸಂಭವಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮಮತಾ ಬ್ಯಾನರ್ಜಿಗೆ ಕೃತಜ್ಞತೆ ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯವರು ರೈತರಿಗೆ ಸದಾ ಬೆಂಬಲ ನೀಡುತ್ತ ಬಂದಿದ್ದಾರೆ. ಹಾಗೇ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಅವರು ಕೇಂದ್ರಕ್ಕೆ ಪತ್ರ ಬರೆಯಲಿ ಎಂಬುದು ನಮ್ಮ ಒತ್ತಾಯ. ಹಾಗೇ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಅವರು ಗಮನಹರಿಸಬೇಕಾದ ಅಗತ್ಯವಿದೆ ಎಂದು ಟಿಕಾಯತ್ ಹೇಳಿದ್ದಾರೆ. ಹಾಗೇ, ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್​ಸಿ ಅನುಮೋದನೆ

Meeting Between Rakesh Tikait and Mamata Banerjee in kolkata

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!