ಮೇಘಾಲಯದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ ಫೆಬ್ರವರಿ 16 ರಂದು ಬೆಳಿಗ್ಗೆ 9.26 ಕ್ಕೆ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಮೇಘಾಲಯದ ಪೂರ್ವ ಖಾಸಿ ಬೆಟ್ಟಗಳಲ್ಲಿ ಭೂಕಂಪದ ಕೇಂದ್ರಬಿಂದುವು 46 ಕಿಮೀ ಆಳದಲ್ಲಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ಫೆಬ್ರವರಿ 13 ರಂದು, ಅಸ್ಸಾಂನಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದು 10 ಕಿಮೀ ಆಳದಲ್ಲಿ ಹೊಜೈ ಜಿಲ್ಲೆಯಲ್ಲಿ ಕೇಂದ್ರೀಕೃತವಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:56 pm, Thu, 16 February 23