ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಇಬ್ಬರನ್ನು ಹೊಡೆದು ಕೊಂದ ಜನ

Mob Lynching: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹೊಡೆದು ಕೊಂದಿರುವ ಘಟನೆ ಮೇಘಾಲಯದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಇಬ್ಬರನ್ನು ಹೊಡೆದು ಕೊಂದ ಜನ
Image Credit source: NDTV

Updated on: May 06, 2024 | 8:46 AM

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ(Meghalaya)ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.

ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರು ಊರಿನ ಎಲ್ಲರಿಗೂ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ನೂರಕ್ಕೂ ಅಧಿಕ ಮಂದಿ ಸೇರಿ ಇಬ್ಬರನ್ನು ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಇಬ್ಬರಲ್ಲಿ ಒಬ್ಬ ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು.
ಛತ್ತೀಸ್​ಗಢದ ರಾಯ್​ಪುರ ಜಿಲ್ಲೆಯ ಅರಂಗ್ ಪೊಲೀಸ್​ ಠಾಣೆಯ ಕಲೈ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: ಎಸ್‌ಐಟಿ ಪ್ರಶ್ನೆಗಳಿಗೆ ರೇವಣ್ಣ ಕೊಟ್ಟ ಉತ್ತರವೇನು?

ಮದುವೆ ನೆಪದಲ್ಲಿ ಆರೋಪಿ ಸಂತ್ರಸ್ತೆಯನ್ನು 6 ತಿಂಗಳಿನಿಂದ ಅತ್ಯಾಚಾರವೆಸಗುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಯುವಕನನ್ನು ಬಂಧಿಸಲಾಗಿದೆ.

ಆರೋಪಿ ಸುರೇಂದ್ರ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ನಂತರ ಮೊಬೈಲ್​ನಲ್ಲಿ ಮಾತನಾಡಲು ಪ್ರಾರಂಭಿಸಿದರು. ಆರೋಪಿ ರಸ್ತೆ ನಿರ್ಮಾಣ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದು, ಆತನ ಪ್ರೀತಿಯ ಬಲೆಯಲ್ಲಿ ಬಾಲಕಿ ಬಿದ್ದಿದ್ದಳು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:46 am, Mon, 6 May 24