’ತಾಲಿಬಾನಿಗಳನ್ನು ನೋಡಿ ಪ್ರಧಾನಿ ಮೋದಿ ಸರ್ಕಾರ ಪಾಠ ಕಲಿಯಲಿ’ -ಪರೋಕ್ಷವಾಗಿ ಉಗ್ರರನ್ನು ಹೊಗಳಿದ ಮೆಹಬೂಬಾ ಮುಫ್ತಿ

ಮೆಹಬೂಬಾ ಮುಫ್ತಿ ತಾಲಿಬಾನ್​ ಪರಾಕ್ರಮವನ್ನು ಹೊಗಳಿದ್ದನ್ನು ಬಿಜೆಪಿ ಮುಖಂಡ ನಿರ್ಮಲ್​ ಸಿಂಗ್ ಖಂಡಿಸಿದ್ದಾರೆ. ಜಮ್ಮು-ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಅವರು, ಮೆಹಬೂಬಾ ಮುಫ್ತಿ ತನ್ನ ರಾಜಕೀಯ ನೆಲೆ ಕಳೆದುಕೊಂಡು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ.

’ತಾಲಿಬಾನಿಗಳನ್ನು ನೋಡಿ ಪ್ರಧಾನಿ ಮೋದಿ ಸರ್ಕಾರ ಪಾಠ ಕಲಿಯಲಿ’ -ಪರೋಕ್ಷವಾಗಿ ಉಗ್ರರನ್ನು ಹೊಗಳಿದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Follow us
TV9 Web
| Updated By: Lakshmi Hegde

Updated on: Aug 21, 2021 | 4:45 PM

ಕಾಶ್ಮೀರದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ತಾಲಿಬಾನಿ (Taliban Terrorists)ಗಳದ್ದು ಪರಾಕ್ರಮ ಎಂಬರ್ಥದಲ್ಲಿ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ (Afghanistan)ವನ್ನು ನೋಡಿ ಪಾಠ ಕಲಿಯಿರಿ, ಕಾಶ್ಮೀರದಲ್ಲಿ ಆರ್ಟಿಕಲ್​ 370 (ವಿಶೇಷ ಸ್ಥಾನಮಾನ -Special Status)ನ್ನು ಪುನಃ ಸ್ಥಾಪಿಸಿ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಅಷ್ಟು ಬಲಿಷ್ಠವಾದ ಅಮೆರಿಕದ ಸೈನಿಕರಿದ್ದರೂ ತಾಲಿಬಾನಿಗಳು ಅವರನ್ನು ಯಶಸ್ವಿಯಾಗಿ ಹೊರಹಾಕಿದರು. ಅದನ್ನು ನೋಡಿ ಮೋದಿಯವರ ಸರ್ಕಾರ ಪಾಠ ಕಲಿಯಬೇಕು. ಕಾಶ್ಮೀರದ ಜನರೊಂದಿಗೆ ಕೂಡಲೇ ಮಾತುಕತೆ ನಡೆಸಿ, ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕು. ಇಲ್ಲದಿದ್ದರೆ, ಏನಾದರೂ ಆಗಬಹುದು ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ತಾಲಿಬಾನ್ ಅಫ್ಘಾನಿಸ್ತಾನದಲ್ಲಿರುವ ನ್ಯಾಟೋ (NATO-North Atlantic Treaty Organization) ಮತ್ತು ಇತರ ವಿದೇಶಿ ಶಕ್ತಿಗಳನ್ನು ಅಲ್ಲಿಂದ ಉಚ್ಚಾಟಿಸಿದ್ದನ್ನು, ಆನೆ-ಇರುವೆ ಕತೆಗೆ ಹೋಲಿಸಿ ಮಾತನಾಡಿದ ಮೆಹಬೂಬಾ ಮುಫ್ತಿ, ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ. ನಿಮ್ಮ ಹಾದಿಯನ್ನು ಬದಲಿಸಿಕೊಳ್ಳಲು ಇನ್ನೂ ಅವಕಾಶ ಇರುವಾಗ ಅದನ್ನು ಕಳೆದುಕೊಳ್ಳಬೇಡಿ. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಪ್ರಾರಂಭಿಸಿದ ಶಾಂತಿ ಪ್ರಕ್ರಿಯೆಯನ್ನು ನೆನಪಿಸಿಕೊಳ್ಳಿ. ಕಾಶ್ಮೀರದ ಜನರೊಂದಿಗೆ ಮಾತುಕತೆ ಪ್ರಾರಂಭಿಸಿ ಬೇಕು ಮತ್ತು ಇಲ್ಲಿಂದ ನೀವು ಲೂಟಿ ಹೊಡೆದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಹೇಳಿದ್ದಾರೆ.

ಅರ್ಧಕ್ಕರ್ಧ ಮೀಡಿಯಾಗಳೂ ಬಿಜೆಪಿಗೇ ಮೀಸಲು ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಇತ್ತೀಗೆ ಮುಫ್ತಿಯವರ ತಾಯಿ ಗುಲ್​ಶಾನ್​ ನಾಝೀರ್​ ಅವರನ್ನು ಜಾರಿ ನಿರ್ದೇಶನಾಲಯ (ED) ಸುಮಾರು 3 ತಾಸುಗಳ ಕಾಲ ವಿಚಾರಣೆ ನಡೆಸಿದೆ. ಈ ಸಂಬಂಧ ಪತ್ರಕರ್ತರು ಪ್ರಶ್ನೆ ಕೇಳಿದಾಗ ಮುಫ್ತಿ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.  ನಮ್ಮ ಹಕ್ಕುಗಳನ್ನು ರಕ್ಷಿಸಬೇಕಾದ, ಭಾರತದ ಸಂವಿಧಾನ, ಚೈತನ್ಯವನ್ನು ಎತ್ತಿಹಿಡಿಯಬೇಕಾದ ಸಂಸ್ಥೆಗಳನ್ನೆಲ್ಲ ತಾಲಿಬಾನೀಕರಣಗೊಳಿಸಲಾಗಿದೆ. ಅಷ್ಟೇ ಏಕೆ, ಈ ದೇಶದ ಮುಖ್ಯವಾಹಿನಿಯಲ್ಲಿರುವ ಬಹುತೇಕ ಮೀಡಿಯಾಗಳೂ ಕೂಡ ತಾಲಿಬಾನೀಕರಣಗೊಂಡಿವೆ.  ಬಿಜೆಪಿ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿವೆ. ಹಲವು ಸಂಸ್ಥೆಗಳ ದುರುಪಯೋಗ ಆಗುತ್ತಿರುವ ಬಗ್ಗೆ ಆ ಮಾಧ್ಯಮಗಳು ಏನೂ ಮಾತನಾಡುತ್ತಿಲ್ಲ ಎಂದು ಹೇಳಿದರು. ಹಾಗೇ, ಇಡಿ ತನಿಖೆ ಶುರುವಾಗಿದೆ..ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ ಎಂದು ತಿಳಿಸಿದರು.

ಬಿಜೆಪಿಯಿಂದ ತಿರುಗೇಟು ಮೆಹಬೂಬಾ ಮುಫ್ತಿ ತಾಲಿಬಾನ್​ ಪರಾಕ್ರಮವನ್ನು ಹೊಗಳಿದ್ದನ್ನು ಬಿಜೆಪಿ ಮುಖಂಡ ನಿರ್ಮಲ್​ ಸಿಂಗ್ ಖಂಡಿಸಿದ್ದಾರೆ. ಜಮ್ಮು-ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಅವರು, ಮೆಹಬೂಬಾ ಮುಫ್ತಿ ತನ್ನ ರಾಜಕೀಯ ನೆಲೆ ಕಳೆದುಕೊಂಡು ಹತಾಶರಾಗಿದ್ದಾರೆ. ಬಿಜೆಪಿ ಕೇಂದ್ರ ಸರ್ಕಾರವನ್ನು ಬ್ಲ್ಯಾಕ್​ಮೇಲ್ ಮಾಡಬಹುದು ಎಂದು ಮೆಹಬೂಬಾ ಮುಫ್ತಿ ಭಾವಿಸಿದ್ದರೆ ಅದು ತಪ್ಪು ಭಾವನೆ. ಯಾಕೆಂದರೆ ಇದು ಮೋದಿ ಸರ್ಕಾರ. ಅಂಥ ಬ್ಲ್ಯಾಕ್​ ಮೇಲ್​​ಗೆಲ್ಲ ಬಗ್ಗುವ, ಹೆದರುವವರು ಇಲ್ಯಾರೂ ಇಲ್ಲ. ಆ ದಿನಗಳೆಲ್ಲ ಕಳೆದುಹೋಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: World U20 Athletics Championships: ಭಾರತಕ್ಕೆ ಮತ್ತೊಂದು ಪದಕ.. 10,000 ಮೀಟರ್ ಕಾಲ್ನಡಿಗೆಯಲ್ಲಿ ಬೆಳ್ಳಿ ಗೆದ್ದ ಅಮಿತ್

ಗೋಕರ್ಣದ ಓಂ ಬೀಚ್​ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಹಾನಗಲ್​ನ ವ್ಯಕ್ತಿ ಸಮುದ್ರಪಾಲು

(Mehbooba Mufti Warning to Centre on Special Status of Jammu Kashmir in the name of Taliban)

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ