Monsoon Session: ರಾಜಸ್ಥಾನ, ಬಂಗಾಳದಲ್ಲಿನ ಘಟನೆಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ಕೌಂಟರ್ ನೀಡಲು ಬಿಜೆಪಿ ಸಿದ್ಧತೆ

ಈ ವಾರದ ಆರಂಭದಲ್ಲಿ, ರಾಜಸ್ಥಾನದ ಜೋಧ್‌ಪುರ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ನಾಲ್ವರು ಕುಟುಂಬ ಸದಸ್ಯರನ್ನು ಕೊಲೆ ಮಾಡಿ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ವರದಿಯಾದ ಪಂಚಾಯತ್ ಚುನಾವಣಾ ಹಿಂಸಾಚಾರದ ಜೊತೆಗೆ ಈ ಭಯಾನಕ ಘಟನೆಯು ಬಿಜೆಪಿ ಸಂಸದರು ಪ್ರಸ್ತಾಪಿಸಲು ಉದ್ದೇಶಿಸಿರುವ ವಿಷಯಗಳಲ್ಲಿ ಒಂದಾಗಿದೆ.

Monsoon Session: ರಾಜಸ್ಥಾನ, ಬಂಗಾಳದಲ್ಲಿನ ಘಟನೆಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ಕೌಂಟರ್ ನೀಡಲು ಬಿಜೆಪಿ ಸಿದ್ಧತೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Jul 20, 2023 | 1:20 PM

ದೆಹಲಿ ಜುಲೈ 20: ಬಿಜೆಪಿಯೇತರ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಹಿಂಸಾಚಾರದ ಘಟನೆಗಳ ಬಗ್ಗೆ ಚರ್ಚೆಗೆ ಕರೆ ನೀಡುವ ಮೂಲಕ ಮಣಿಪುರದ(Manipur Violence) ವಿಡಿಯೊ ವಿಷಯವನ್ನು ಪ್ರಸ್ತಾಪಿಸುವ ಪ್ರತಿಪಕ್ಷಗಳ ಯೋಜನೆಯನ್ನು ಎದುರಿಸಲು ಬಿಜೆಪಿಯ (BJP) ಸಂಸತ್ ಸದಸ್ಯರು ಯೋಜಿಸುತ್ತಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಲ್ಲಿ (West Bengal) ಇತ್ತೀಚಿನ ಹಿಂಸಾತ್ಮಕ ಘಟನೆಗಳ ಹಿನ್ನೆಲೆಯಲ್ಲಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಪ್ರತಿಪಕ್ಷಗಳನ್ನು ಎದುರಿಸಲು ಬಿಜೆಪಿಯ ಉದ್ದೇಶವನ್ನು ಹೇಳಿದ್ದಾರೆ. ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಜೋಶಿ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ, ರಾಜಸ್ಥಾನದ ಜೋಧ್‌ಪುರ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ನಾಲ್ವರು ಕುಟುಂಬ ಸದಸ್ಯರನ್ನು ಕೊಲೆ ಮಾಡಿ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ವರದಿಯಾದ ಪಂಚಾಯತ್ ಚುನಾವಣಾ ಹಿಂಸಾಚಾರದ ಜೊತೆಗೆ ಈ ಭಯಾನಕ ಘಟನೆಯು ಬಿಜೆಪಿ ಸಂಸದರು ಪ್ರಸ್ತಾಪಿಸಲು ಉದ್ದೇಶಿಸಿರುವ ವಿಷಯಗಳಲ್ಲಿ ಒಂದಾಗಿದೆ.

ಈ ಕಾರ್ಯತಂತ್ರದ ಕ್ರಮವು ಮಣಿಪುರ ಹಿಂಸಾಚಾರ, ರೈಲ್ವೆ ಸುರಕ್ಷತೆ, ನಿರುದ್ಯೋಗ, ಹಣದುಬ್ಬರ, ಭಾರತ-ಚೀನಾ ಗಡಿ ಬಿಕ್ಕಟ್ಟು ಮತ್ತು ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಅಸಮತೋಲನದಂತಹ ಸಮಸ್ಯೆಗಳನ್ನು ಒಳಗೊಂಡಿರುವ ವಿರೋಧ ಪಕ್ಷದ ಯೋಜಿತ ಕಾರ್ಯಸೂಚಿಯನ್ನು ತಟಸ್ಥಗೊಳಿಸುವ ಉದ್ದೇಶವನ್ನು ಹೊಂದಿದೆ.

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲು, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿವಾದಾತ್ಮಕ ವಿಡಿಯೊದ ನಂತರ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ಕುರಿತು ಚರ್ಚೆಗೆ ವಿವಿಧ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ

ಕಾಂಗ್ರೆಸ್‌ನ ಮಾಣಿಕ್ಕಂ ಟ್ಯಾಗೋರ್, ಸಿಪಿಐ ಸಂಸದ ಬಿನೋಯ್ ವಿಶ್ವಂ, ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ಮತ್ತು ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ಸೇರಿದಂತೆ ಹಲವು ವಿರೋಧ ಪಕ್ಷದ ಸಂಸದರು ಮಣಿಪುರದ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದಾರೆ.

ಆದರೆ, ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಷಯಗಳನ್ನು ಚರ್ಚಿಸಲು ಸಿದ್ಧ ಎಂದು ಸರ್ಕಾರ ಹೇಳಿದೆ. ಸಂಸತ್ತಿನ ಸುಗಮ ಕಲಾಪಕ್ಕೆ ಬೆಂಬಲ ನೀಡುವಂತೆ ನಾವು ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ಜೋಶಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Thu, 20 July 23