ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಋತುಚಕ್ರದ ರಜೆ ವಿಸ್ತರಣೆ

ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಕೇರಳ ಸರ್ಕಾರ ನಿರ್ಧರಿಸಿದೆ.

ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಋತುಚಕ್ರದ ರಜೆ ವಿಸ್ತರಣೆ
ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್​. ಬಿಂದು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 17, 2023 | 11:19 AM

ತಿರುವನಂತಪುರಂ: ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (CUSAT) ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ನುಮುಂದೆ ವಿದ್ಯಾರ್ಥಿನಿಯರು ಮುಟ್ಟಿನ ರಜೆಯನ್ನು (Menstrual Leave) ಪಡೆಯಬಹುದು.

ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್​. ಬಿಂದು, ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕೊಚ್ಚಿನ್ ವಿಶ್ವವಿದ್ಯಾನಿಲಯ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ; ಕೇರಳದ ವಿಶ್ವವಿದ್ಯಾಲಯದಿಂದ ಐತಿಹಾಸಿಕ ನಿರ್ಧಾರ

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕ್ಯುಸಾಟ್) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ 4,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು.

ಕ್ಯುಸಾಟ್‌ನಲ್ಲಿರುವ ಮಹಿಳಾ ವಿದ್ಯಾರ್ಥಿನಿಯರ ಹಾಜರಾತಿಯಲ್ಲಿ ಒಂದು ತ್ರೈಮಾಸಿಕಕ್ಕೆ ಶೇ. 2ರಷ್ಟು ಹಾಜರಾತಿಯನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಪ್ರಸ್ತುತ ಶೇ. 75ರಷ್ಟು ಹಾಜರಾತಿ ಇದ್ದವರು ಮಾತ್ರ ಸೆಮಿಸ್ಟರ್ ಪರೀಕ್ಷೆ ಬರೆಯಬಹುದು. ಇದಕ್ಕಿಂತ ಕಡಿಮೆ ಹಾಜರಾತಿ ಇದ್ದಲ್ಲಿ ಉಪಕುಲಪತಿಗಳಿಗೆ ಅರ್ಜಿ ಸಲ್ಲಿಸಿ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಆದರೆ, ಮುಟ್ಟಿನ ರಜೆಗೆ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಘೋಷಿಸಲಾಗಿತ್ತು. ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನೇತೃತ್ವದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವು ವಿಶ್ವವಿದ್ಯಾನಿಲಯಕ್ಕೆ ಋತುಚಕ್ರದ ರಜೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿತ್ತು. ಒಕ್ಕೂಟದ ಮಧ್ಯಸ್ಥಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದಕ್ಕೆ ಭಾರೀ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಇದೀಗ ಈ ಸೌಲಭ್ಯ ಕೇರಳದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಸಿಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು