Menstrual Leave: ಉದ್ಯೋಗಿಗಳಿಗೆ ಮುಟ್ಟಿನ ರಜೆ; ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಸಮಸ್ಯೆಯು ಬಹು ನೀತಿ ಅಂಶಗಳಿಗೆ ಸಂಬಂಧಿಸಿದೆ. ಹಾಗಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. "ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿನ ಕಾರ್ಯದರ್ಶಿಯನ್ನು ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಸಂಪರ್ಕಿಸಲು ನಾವು ಅರ್ಜಿದಾರರಿಗೆ ಅನುಮತಿ ನೀಡುತ್ತೇವೆ ಎಂದು ನ್ಯಾಯಪೀಠ ಹೇಳಿದೆ. ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮುಟ್ಟಿನ ರಜೆಗೆ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದಾಗ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಇದೇ ರೀತಿಯ ನಿಲುವನ್ನು ತೆಗೆದುಕೊಂಡಿತ್ತು.

Menstrual Leave: ಉದ್ಯೋಗಿಗಳಿಗೆ ಮುಟ್ಟಿನ ರಜೆ; ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 08, 2024 | 2:58 PM

ದೆಹಲಿ ಜುಲೈ 08: ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ (Menstrual Leave) ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದು ಸರ್ಕಾರದ ನೀತಿಗೆ ಸಂಬಂಧಿಸಿದ್ದು, ನ್ಯಾಯಾಲಯಗಳು ಪರಿಶೀಲಿಸಬೇಕಾದ ವಿಷಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮುಟ್ಟಿನ ರಜೆಗಾಗಿ ನೀತಿಗಳನ್ನು ರೂಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಆಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ಅಂತಹ ರಜೆಗಳನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರು ಉದ್ಯೋಗಗಳಿಂದ ದೂರವಿರುತ್ತಾರೆ. ನಾವು ಅದನ್ನು ಬಯಸುವುದಿಲ್ಲ. ಮಹಿಳೆಯರನ್ನು ರಕ್ಷಿಸಲು ನಾವು ಏನು ಮಾಡಲು ಪ್ರಯತ್ನಿಸುತ್ತೇವೆಯೋ ಅದು ಅವರ ಅನನುಕೂಲತೆಗೆ ಕಾರಣವಾಗುವುದನ್ನು ನಾವು ಬಯಸುವುದಿಲ್ಲ. ಇದು ವಾಸ್ತವವಾಗಿ ಸರ್ಕಾರದ ನೀತಿ ಅಂಶವಾಗಿದೆ. ನ್ಯಾಯಾಲಯಗಳು ಪರಿಶೀಲಿಸುವ ವಿಷಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಮಸ್ಯೆಯು ಬಹು ನೀತಿ ಅಂಶಗಳಿಗೆ ಸಂಬಂಧಿಸಿದೆ. ಹಾಗಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. “ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿನ ಕಾರ್ಯದರ್ಶಿಯನ್ನು ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಸಂಪರ್ಕಿಸಲು ನಾವು ಅರ್ಜಿದಾರರಿಗೆ ಅನುಮತಿ ನೀಡುತ್ತೇವೆ. ಈ ವಿಷಯವನ್ನು ನೀತಿ ಮಟ್ಟದಲ್ಲಿ ಪರಿಶೀಲಿಸಲು ಮತ್ತು ಎಲ್ಲಾ ಮಧ್ಯಸ್ಥಗಾರರನ್ನು ಸಂಪರ್ಕಿಸಿದ ನಂತರ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂಬುದನ್ನು ತೀರ್ಮಾನಿಸಲು ನಾವು ಕಾರ್ಯದರ್ಶಿಯಲ್ಲಿ ವಿನಂತಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಈ ನಿಟ್ಟಿನಲ್ಲಿ ಯಾವುದೇ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಈ ತೀರ್ಪು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮುಟ್ಟಿನ ರಜೆಗೆ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದಾಗ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಇದೇ ರೀತಿಯ ನಿಲುವನ್ನು ತೆಗೆದುಕೊಂಡಿತ್ತು.

ಇದನ್ನೂ ಓದಿ: ಸಂದೇಶಖಾಲಿ ಪ್ರಕರಣ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಬಂಗಾಳ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ

ಪ್ರಸ್ತುತ, ಬಿಹಾರ ಮತ್ತು ಕೇರಳ ದೇಶದಲ್ಲಿ ಋತುಚಕ್ರದ ರಜೆಗೆ ಅವಕಾಶವನ್ನು ಹೊಂದಿರುವ ಎರಡು ರಾಜ್ಯಗಳಾಗಿವೆ. ಬಿಹಾರವು ಮಹಿಳಾ ಉದ್ಯೋಗಿಗಳಿಗೆ ಎರಡು ದಿನಗಳ ರಜೆ ನೀತಿಯನ್ನು ಹೊಂದಿದ್ದರೆ, ಕೇರಳದಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಅವಧಿಯ ರಜೆಗೆ ಅವಕಾಶವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 8 July 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್