ಬ್ರೇಕ್​ಅಪ್ ಆದಾಕ್ಷಣ ಸಂಗಾತಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸುವುದು ತಪ್ಪು: ಸುಪ್ರೀಂಕೋರ್ಟ್​

ಪ್ರೀತಿಯ ಆರಂಭಿಕ ಹಂತಗಳಲ್ಲಿ ಇಬ್ಬರ ನಡುವಿನ ಒಮ್ಮತದ ಸಂಬಂಧವು ವಿವಾಹವಾಗಿ ಫಲಪ್ರದವಾಗದಿದ್ದಾಗ ಸಂಗಾತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ತಪ್ಪು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ಗೆಳತಿ ನೀಡಿದ ದೂರಿನ ಮೇರೆಗೆ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.

ಬ್ರೇಕ್​ಅಪ್Image Credit source: Mark Manson
Follow us
ನಯನಾ ರಾಜೀವ್
|

Updated on:Nov 21, 2024 | 3:23 PM

ಪ್ರೀತಿಯ ಆರಂಭಿಕ ಹಂತಗಳಲ್ಲಿ ಇಬ್ಬರ ನಡುವಿನ ಒಮ್ಮತದ ಸಂಬಂಧವು ವಿವಾಹವಾಗಿ ಫಲಪ್ರದವಾಗದಿದ್ದಾಗ ಸಂಗಾತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ತಪ್ಪು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ಗೆಳತಿ ನೀಡಿದ ದೂರಿನ ಮೇರೆಗೆ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಪ್ರಶಾಂತ್ ವಿರುದ್ಧ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದರು. ಇಬ್ಬರ ನಡುವೆ ಸಂಬಂಧ ಮೊದಲು ಚೆನ್ನಾಗಿಯೇ ಇತ್ತು, ಅದೇ ಬ್ರೇಕ್ ಅಪ್​ ಬಳಿಕ ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ತಪ್ಪು.

ಆರೋಪಿ ಮತ್ತು ದೂರುದಾರರಿಬ್ಬರೂ ದೆಹಲಿಯಲ್ಲಿ ವಾಸವಿದ್ದು, ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪೀಠ ಗಮನಿಸಿದೆ. 2019 ರಲ್ಲಿ ಆಕೆಯನ್ನು ಮದುವೆಯಾಗಲು ವ್ಯಕ್ತಿ ನಿರಾಕರಿಸಿದಾಗ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಓದಿ: ಸಂಗಾತಿ ಸಹರಿಸದಿದ್ದರೆ ದೈಹಿಕ ವಾಂಛೆ ತೀರಿಸಲು ಎಲ್ಲಿಗೆ ಹೋಗಬೇಕು?: ಎಫ್‌ಐಆರ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್

ಇಬ್ಬರೂ ವಿದ್ಯಾವಂತರಾಗಿದ್ದು, ಆರಂಭದಲ್ಲಿ ಮದುವೆಯಾಗಲು ಆಲೋಚಿಸಿದ್ದರು. ನಂತರ ಅವರ ದಾರಿ ಬೇರೆಯಾಗಿತ್ತು. 2019ರ ವೇಳೆ ಇಬ್ಬರೂ ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ಇದಾದ ಬಳಿಕ ಮಹಿಳೆ ವ್ಯಕ್ತಿಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಸಂಬಂಧದ ಪ್ರಾರಂಭದಲ್ಲಿ ಆರೋಪಿಯು ಮದುವೆಯ ಸುಳ್ಳು ಭರವಸೆಯನ್ನು ನೀಡಿದ್ದಾನೆ ಎಂಬುದಕ್ಕೆ ಯಾವುದೇ ಪುರಾವೆಗಳನ್ನು ಕೋರ್ಟ್​ ಕಂಡುಕೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:23 pm, Thu, 21 November 24

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್