AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಮಾಡಿದ್ದ ಮೆಟಾಗೆ ಸರ್ಕಾರದ ಬಿಸಿ

ಪ್ರಧಾನಿ ಮೋದಿ ವಿಡಿಯೊ ನಿರ್ಬಂಧಿಸಿದ್ದ ಮೆಟಾ ಸಂಸ್ಥೆಯ ವಿರುದ್ಧ ಸೈಬರ್‌ ಕ್ರೈಮ್‌ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಧಾನಿಯ ನಕಲಿ, ಮಾರ್ಫ್ ಮಾಡಿದ ವಿಡಿಯೊಗಳ ಕುರಿತು ಕ್ರಮ ಜರುಗಿಸಲಾಗಿದೆ. ಸರ್ಕಾರದ ಆಕ್ಷೇಪದ ನಂತರ, ಮೆಟಾ ವಿಐಪಿ ಖಾತೆಗಳ ಸುರಕ್ಷತೆಯನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದೆ. ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವಿಷಯ ನಿರ್ವಹಣೆಗೆ ಮುಂದಾಗಿದೆ.

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಮಾಡಿದ್ದ ಮೆಟಾಗೆ ಸರ್ಕಾರದ ಬಿಸಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 31, 2026 | 9:40 AM

Share

ನವದೆಹಲಿ, ಜುಲೈ 31: ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹಾಗೂ ಮಾರ್ಫ್ ಮಾಡಿದ ವೀಡಿಯೊಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಮೆಟಾ ಇಂಡಿಯಾ (Meta India) ಸಂಸ್ಥೆಯ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ. ಹೈದರಾಬಾದ್ ಸೈಬರ್ ಕ್ರೈಮ್ ಪೋಲಿಸರು ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಸೇರಿದಂತೆ ಹಲವು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಪ್ರಧಾನಿಯವರ ನಕಲಿ, ಅಶ್ಲೀಲ ಮತ್ತು ದಾರಿತಪ್ಪಿಸುವ ವೀಡಿಯೊಗಳನ್ನು ಸೃಷ್ಟಿಸಿ ಹರಿಬಿಡಲಾಗಿತ್ತು. ಕೃತಕ ಬುದ್ಧಿಮತ್ತೆ (AI) ಬಳಸಿ ಈ ವಿಡಿಯೋಗಳನ್ನು ಮಾರ್ಫ್ ಮಾಡಲಾಗಿದೆ ಎಂದು ಇಬ್ಬರು ದೂರುದಾರರು ಆರೋಪಿಸಿದ್ದಾರೆ.

ಈ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳಲ್ಲಿ ಅವಹೇಳನಕಾರಿ ಹಾಗೂ ಅಸಭ್ಯ ಭಾಷೆಯನ್ನು ಬಳಸಲಾಗಿದ್ದು, ಸಾರ್ವಜನಿಕರಲ್ಲಿ ದ್ವೇಷ ಮತ್ತು ಅಶಾಂತಿಯನ್ನು ಪ್ರಚೋದಿಸುವ ಸಾಮರ್ಥ್ಯ ಹೊಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಿಜೆಪ ವಿದ್ಯಾರ್ಥಿ ಪ್ರತಿಭಟನೆಯ ನೆಪದಲ್ಲಿ ಇಂತಹ ನಿಂದನೀಯ ಪೋಸ್ಟ್‌ಗಳನ್ನು ವೈರಲ್ ಮಾಡಲಾಗಿತ್ತು. ಈ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ಅವರ ಅಧಿಕೃತ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದ ವೀಡಿಯೊ ಒಂದನ್ನು ಫೇಸ್‌ಬುಕ್ ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಇದರಿಂದ ಕೇಂದ್ರ ಸರ್ಕಾರವು ಮೆಟಾ ಸಂಸ್ಥೆಯ ನಡವಳಿಕೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು.

ಮತ್ತಷ್ಟು ಓದಿ: ಮೋದಿ ಕಾಲು ತೊಳೆದು ನೀರು ಕುಡಿಯುತ್ತೇನೆ: ಪ್ರಧಾನಿಯನ್ನು ವಿಷ್ಣು ಅವತಾರ ಎಂದ ನಟ ಸುದೇಶ್ ಬೇರಿ

ಸರ್ಕಾರದ ಖಂಡನೆಯ ಬೆನ್ನಲ್ಲೇ ಮೆಟಾ ಸಂಸ್ಥೆಯು ಪ್ರಧಾನ ಮಂತ್ರಿಯವರ ಖಾತೆಯ ಸುರಕ್ಷತೆಗೆ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಇನ್ಮುಂದೆ ಪ್ರಧಾನಿ ಖಾತೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಕಂಪನಿಯ ಕನಿಷ್ಠ ಇಬ್ಬರು ಹಿರಿಯ ಅಧಿಕಾರಿಗಳು ಪರಿಶೀಲಿಸಿದ ನಂತರವೇ ನಿರ್ಧಾರ ಕೈಗೊಳ್ಳಲಿದ್ದಾರೆ. ವಿಷಯ ನಿಯಂತ್ರಣ ಮತ್ತು ಸೈಬರ್ ಸುರಕ್ಷತೆಯ ಕುರಿತು ಚರ್ಚಿಸಲು ಮೆಟಾ ಸಂಸ್ಥೆಯ ಉನ್ನತ ಮಟ್ಟದ ತಂಡವು ಈ ವಾರದ ಕೊನೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಭೇಟಿ ಮಾಡಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!