AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MeToo: ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ, ದೆಹಲಿ ಪೊಲೀಸರಿಗೆ ಸುಪ್ರೀಂ ನೋಟಿಸ್

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​​ ನೋಟಿಸ್​​ ನೀಡಿದೆ.

MeToo: ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ, ದೆಹಲಿ ಪೊಲೀಸರಿಗೆ ಸುಪ್ರೀಂ ನೋಟಿಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 25, 2023 | 11:39 AM

Share

ದೆಹಲಿ: ಒಂದು ವರ್ಷಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ದೊಡ್ಡ ಬಲ ಸಿಕ್ಕಿದೆ. ಇದೀಗ ಸುಪ್ರೀಂ ಕೋರ್ಟ್​​ ದೆಹಲಿ ಪೊಲೀಸರಿಗೆ ನೋಟಿಸ್​​ ನೀಡಿದೆ.  ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರ ಜತೆಗೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದರು, ಇದೀಗ ಈ ವಿಚಾರವಾಗಿ ಈ ಆರೋಪಗಳನ್ನು “ಗಂಭೀರ” ವಿಚಾರ ಎಂದು ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಇದೆ ಶುಕ್ರವಾರ (ಏ.28) ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ. ಆಶ್ವಾಸನೆ ನೀಡಿದ್ದರಿಂದ ನಾವು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಅದು ಸುಳ್ಳು ಆಶ್ವಾಸನೆಯಾಗಿತ್ತು ಎಂದು ಅವರು ಹೇಳಿದ್ದಾರೆ. ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಫುಟ್‌ಪಾತ್‌ನಲ್ಲಿಯೇ ಇಡೀ ರಾತ್ರಿ ಕಳೆದ ಫೋಗಟ್ ಹೇಳಿದ್ದಾರೆ.

ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದಿದ್ದಾರೆ ಫೋಗಟ್. ಹಲವಾರು ಕುಸ್ತಿಪಟುಗಳು ಜನವರಿ 18 ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿದ್ದರು. ಗಣ್ಯ ಕುಸ್ತಿಪಟುಗಳು ಸರ್ಕಾರದೊಂದಿಗಿನ ನಡೆಸಿದ ಮಾತುಕತೆಯಿಂದ ತೃಪ್ತರಾಗಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಕುಸ್ತಿ ಕಣಕ್ಕಿಳಿಯುವುದಿಲ್ಲ ಎಂದು ಅವರು ಹೇಳಿದ್ದರು.

ಮೇ 7 ರಂದು ನಡೆಯಲಿರುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.ಸಿಂಗ್ ಸತತವಾಗಿ ಮೂರು ನಾಲ್ಕು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಸ್ಪೋರ್ಟ್ಸ್ ಕೋಡ್ ಪ್ರಕಾರ WFI ಮುಖ್ಯಸ್ಥರಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ಅವರು ಉನ್ನತ ಹುದ್ದೆಗೆ ಸ್ಪರ್ಧಿಸಲು ಅನರ್ಹರಾಗಿದ್ದಾರೆ.

ಇದನ್ನೂ ಓದಿ: BJP MP: ವೇದಿಕೆಯಲ್ಲೇ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಸಂಸದ; ಘಟನೆಯೇನು? ವಿಡಿಯೋ ಇಲ್ಲಿದೆ

ಡಬ್ಲ್ಯುಎಫ್‌ ಅಧ್ಯಕ್ಷರ ವಿರುದ್ಧ ದೆಹಲಿ ಪೊಲೀಸರು ಏಳು ದೂರುಗಳನ್ನು ದಾಖಲಿಸಿದ್ದಾರೆ, ಆದರೆ ಎಫ್‌ಐಆರ್ ದಾಖಲಾಗಿಲ್ಲ. ಖಚಿತವಾದ ಸಾಕ್ಷ್ಯಾಧಾರಗಳು ಬೆಳಕಿಗೆ ಬಂದ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹಿರಿಯ ಪೋಲೀಸ್ ತಿಳಿಸಿದ್ದಾರೆ. ವಿಚಾರಣೆಯ ಭಾಗವಾಗಿ, ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಪರಿಶೀಲಿಸಲು ನಾವು ಕ್ರೀಡಾ ಸಚಿವಾಲಯ ರಚಿಸಿರುವ ತನಿಖಾ ಸಮಿತಿಯಿಂದ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದ್ದರು. ನೆನ್ನೆ (ಏ.24)ರಂದು ಕ್ರೀಡಾಪಟುಗಳು ಸುಪ್ರೀಂ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಎಫ್‌ಐಆರ್ ದಾಖಲು ಮಾಡದೆಯಿರಲು ಕಾರಣ ಮತ್ತು ಈ ಪ್ರಕರಣಕ್ಕೆ ಸಂಬಂಧಿದಂತೆ ಯಾವುದೇ ಪ್ರಾಥಮಿಕ ವರದಿ ನೀಡದೇ ಇರುವ ಬಗ್ಗೆ ಸ್ಪಷ್ಟನೆ ನೀಡುವಂತೆ ಸುಪ್ರೀಂ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:12 am, Tue, 25 April 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ