AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ, ಷರತ್ತುಗಳು ಏನು?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಇಡೀ ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕೇಂದ್ರ ಗೃಹ ಇಲಾಖೆ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ನೀಡಿದ್ದು, ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ ನೀಡಿದೆ. ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತೆರಳಬೇಕಿರುವ ರಾಜ್ಯಗಳೊಂದಿಗೆ ಆಯಾ ರಾಜ್ಯ ಸರ್ಕಾರಗಳೇ ಚರ್ಚಿಸಿ, ಕಳಿಸುವ ವ್ಯವಸ್ಥೆ […]

ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ, ಷರತ್ತುಗಳು ಏನು?
ಸಾಧು ಶ್ರೀನಾಥ್​
|

Updated on:Apr 29, 2020 | 7:29 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಇಡೀ ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಕೇಂದ್ರ ಗೃಹ ಇಲಾಖೆ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ನೀಡಿದ್ದು, ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ ನೀಡಿದೆ. ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತೆರಳಬೇಕಿರುವ ರಾಜ್ಯಗಳೊಂದಿಗೆ ಆಯಾ ರಾಜ್ಯ ಸರ್ಕಾರಗಳೇ ಚರ್ಚಿಸಿ, ಕಳಿಸುವ ವ್ಯವಸ್ಥೆ ಮಾಡಬೇಕು ಎಂದಿದೆ.

ಕೊರೊನಾ ವೈರಸ್ ಸೋಂಕಿನ ಲಕ್ಷಣ ಇಲ್ಲದವರನ್ನಷ್ಟೇ ಅವರ ರಾಜ್ಯಗಳಿಗೆ ಕಳುಹಿಸಬೇಕು. ಸ್ಯಾನಿಟೈಸ್ ಮಾಡಿದ ಬಸ್​ಗಳಲ್ಲಿ ಮಾತ್ರ ಅಂತರ ಕಾಯ್ದುಕೊಂಡು ಕಳುಹಿಸಬೇಕು. ಅವರು ತಮ್ಮ ರಾಜ್ಯಗಳಿಗೆ ತಲುಪಿದ ಮೇಲೆ ಕ್ವಾರಂಟೈನ್ ಮಾಡಲು ಗೃಹ ಇಲಾಖೆ ಸೂಚನೆ ಕೊಟ್ಟಿದೆ.

Published On - 7:22 pm, Wed, 29 April 20