IAF Fighter Aircraft Crash: ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ಪತನ, ಮೂವರು ಸಾವು
ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.
ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ. ಭಾರತೀಯ ವಾಯುಪಡೆಯ (ಐಎಎಫ್) ಮಿಗ್-21 ಯುದ್ಧ ವಿಮಾನ ಸೋಮವಾರ ರಾಜಸ್ಥಾನದ ಸಮೀಪ ಪತನಗೊಂಡಿದೆ. ಸುದ್ದಿ ಸಂಸ್ಥೆ ANI ವರದಿ ಪ್ರಕಾರ , ಪತನಗೊಂಡ MiG-21 ಯುದ್ಧ ವಿಮಾನದ ಪೈಲಟ್ ಸುರಕ್ಷಿತವಾಗಿದ್ದಾರೆ. ಮೂವರು ಸಾರ್ವಜನಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಮಾನ ಅವಶೇಷಗಳು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ, ಬಹ್ಲೋಲ್‌ನಗರ ಜಿಲ್ಲೆಯಲ್ಲಿರುವ ಮನೆಯ ಮೇಲೆ ವಿಮಾನ ಅಪಘಾತಕ್ಕೀಡಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
The accident has unfortunately led to the loss of three lives on ground. The IAF regrets this loss and offers its deepest condolences to the bereaved families.https://t.co/2qcCldHSgU
— Indian Air Force (@IAF_MCC) May 8, 2023
ಭಾರತೀಯ ವಾಯುಪಡೆಯು ವಾಡಿಕೆಯ ತರಬೇತಿಯ ಸಮಯದಲ್ಲಿ ಸೂರತ್‌ಗಢದ ಬಳಿ MiG-21 ವಿಮಾನ ಪತನಗೊಂಡಿದೆ ಎಂದು ಹೇಳಿದೆ.
ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ. ಪೈಲಟ್ ಸಕಾಲದಲ್ಲಿ ವಿಮಾನದಿಂದ ಹೊರಬಿದ್ದಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:52 am, Mon, 8 May 23