ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ
ದಾಳಿ ನಡೆದ ಸ್ಥಳದಲ್ಲಿ ಭದ್ರತೆ
Follow us
TV9 Web
| Updated By: Lakshmi Hegde

Updated on:Sep 12, 2021 | 3:47 PM

ಶ್ರೀನಗರ: ಶಂಕಿತ ಉಗ್ರರ ಗುಂಪೊಂದು ಜಮ್ಮು-ಕಾಶ್ಮೀರ (Jammu-Kashmir)ದ ಶ್ರೀನಗರದಲ್ಲಿರುವ ಖನ್ಯಾರ್​ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ (Police Officer) ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಖನ್ಯಾರ್​ ಠಾಣೆಯ ಪಿಎಸ್​ಐ ಅರ್ಶಿದ್​ ಅಹ್ಮದ್​, ಇಂದು ಮಧ್ಯಾಹ್ನ 1.35ರ ಹೊತ್ತಿಗೆ ಖನ್ಯಾರ್​ನ ಪೊಲೀಸ್​ ನಾಖಾ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.  

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ಇಡೀ ಪ್ರದೇಶಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಉಗ್ರರಿಗಾಗಿ ಹುಡುಕಾಟವೂ ನಡೆಯುತ್ತಿದೆ. ಕಳೆದ ತಿಂಗಳು ಬಿಎಸ್​ಎಫ್​ ಯೋಧರ ಮೇಲೆ ಜಮ್ಮು-ಕಾಶ್ಮೀರದ ಕುಲಗಾಂವ್​ನಲ್ಲಿ ಭಯೋತ್ಪಾದಕರ ದಾಳಿಯಾಗಿತ್ತು. ಆದರೆ ಅದೃಷ್ಟವಶಾತ್​ ಯಾರಿಗೂ ಏನೂ ಆಗಿರಲಿಲ್ಲ.  ಜಮ್ಮು-ಕಾಶ್ಮೀರದಲ್ಲಿ ಉಗ್ರದಾಳಿ ಸಾಮಾನ್ಯವಾಗಿದೆ. ರಕ್ಷಣಾ ಪಡೆಗಳೂ ಕೂಡ ಭಯೋತ್ಪಾದಕರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಅದರಲ್ಲೂ ಪುಲ್ವಾಮಾ, ಕುಲಗಾಂವ್​ಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದಲ್ಲಿ ಉಗ್ರರ ಹಾವಳಿಯಿದೆ.

ಇದನ್ನೂ ಓದಿ: ತುಮಕೂರು: ಕಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್​ಟಿಸಿ ಬಸ್ ಅಪಘಾತ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

Published On - 3:43 pm, Sun, 12 September 21

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?