Military helicopter crash: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಛೇರಿಯಿಂದ 25 ಕಿಮೀ ದೂರದಲ್ಲಿರುವ ಸಿಂಗಿಂಗ್ ಹಳ್ಳಿಯ ಬಳಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ.
ಇಟಾನಗರ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಚೇರಿಯಿಂದ 25 ಕಿಮೀ ದೂರದಲ್ಲಿರುವ ಸಿಂಗಿಂಗ್ ಹಳ್ಳಿಯ ಬಳಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತದ ಸ್ಥಳಕ್ಕೆ ರಸ್ತೆ ಸಂಪರ್ಕವಿಲ್ಲ, ಆದರೆ, ಇದೀಗ ರಕ್ಷಣಾ ತಂಡವನ್ನು ಆ ಪ್ರದೇಶಕ್ಕೆ ಕಳುಹಿಸಲಾಗಿದೆ. ಭಾರತೀಯ ಸೇನೆಯ ಹೆಲಿಕಾಪ್ಟರ್ ಶುಕ್ರವಾರ ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಸಿಂಗಿಂಗ್ ಗ್ರಾಮದ ಬಳಿ ಪತನಗೊಂಡಿದೆ. ಹೆಚ್ಎಎಲ್ ರುದ್ರ ಎಂಬ ಹೆಲಿಕಾಪ್ಟರ್ ಸಿಂಗಿಂಗ್ ಬಳಿ ಪತನಗೊಂಡ ನಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಟ್ಯೂಟಿಂಗ್ ಪ್ರಧಾನ ಕಛೇರಿಯಿಂದ ಸುಮಾರು 25 ಕಿಮೀ ದೂರದಲ್ಲಿ ಈ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದ ಬಳಿ ರಸ್ತೆಯ ಮೂಲಕ ಸಂಪರ್ಕವಿರದ ಹಿನ್ನೆಲೆಯಲ್ಲಿ ರಕ್ಷಣಾ ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಕಷ್ಟಕರವಾಗಿದೆ.
Itanagar, Arunachal Pradesh | A military chopper crashed near singging village, 25 kms away from the Tuting headquarters in the Upper Siang district today. Site of accident not connected by road, rescue team sent. Further details awaited: Defence PRO, Guwahati pic.twitter.com/G2y7aEjQmT
— ANI (@ANI) October 21, 2022
ರುದ್ರ ಭಾರತೀಯ ಸೇನೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತಯಾರಿಸಿದ ಅಟ್ಯಾಕ್ ಹೆಲಿಕಾಪ್ಟರ್ ಆಗಿದೆ. ಇದು ಧ್ರುವ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH)ನ ವೆಪನ್ ಸಿಸ್ಟಮ್ ಇಂಟಿಗ್ರೇಟೆಡ್ (WSI) Mk-IV ರೂಪಾಂತರವಾಗಿದೆ.
ಇದನ್ನೂ ಓದಿ: Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ; 7 ಮಂದಿ ದುರ್ಮರಣ
“ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಛೇರಿಯಿಂದ 25 ಕಿಮೀ ದೂರದಲ್ಲಿರುವ ಸಿಂಗಿಂಗ್ ಗ್ರಾಮದ ಬಳಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತದ ಸ್ಥಳವನ್ನು ರಸ್ತೆಯ ಮೂಲಕ ಸಂಪರ್ಕಿಸಲು ಸಾಧ್ಯವಾಗಿಲ್ಲ. ಈಗಾಗಲೇ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ಸೇನಾಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಚೀನಾದ ಗಡಿಯ ಸಮೀಪ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‌ಗಳಲ್ಲಿ ಒಬ್ಬರು ಸಾವನ್ನಪ್ಪಿದ್ದರು. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪೈಲಟ್‌ಗಳಲ್ಲಿ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:09 pm, Fri, 21 October 22