Millets Food Festival 2022: ಸಂಸತ್​ನಲ್ಲಿ ಇಂದು ಸಿರಿಧಾನ್ಯ ಆಹಾರ ಉತ್ಸವ, ವಿವಿಧ ಖಾದ್ಯಗಳನ್ನು ಸವಿಯಲಿರುವ ಸಂಸದರು

ವಿಶ್ವಸಂಸ್ಥೆಯ ಸಾಮಾನ್ಯ ಸಭೆ 75ನೇ ಅಧಿವೇಶನದಲ್ಲಿ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿತು. ಪ್ರಧಾನಿ ಮೋದಿ ಅವರ ನೇತೃತ್ವದ ಭಾರತ ಸರ್ಕಾರವು ಸಿರಿಧಾನ್ಯಗಳ ವರ್ಷ 2023ರ ಪ್ರಸ್ತಾಪವನ್ನು ಮುಂದಿಟ್ಟಿತ್ತು.

Millets Food Festival 2022: ಸಂಸತ್​ನಲ್ಲಿ ಇಂದು ಸಿರಿಧಾನ್ಯ ಆಹಾರ ಉತ್ಸವ, ವಿವಿಧ ಖಾದ್ಯಗಳನ್ನು ಸವಿಯಲಿರುವ ಸಂಸದರು
ಸಂಗ್ರಹ ಚಿತ್ರ
Follow us
TV9 Web
| Updated By: Rakesh Nayak Manchi

Updated on:Dec 20, 2022 | 7:45 AM

ದೆಹಲಿ: ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ಅನ್ನು ಆಚರಿಸಲು ಕೇಂದ್ರವು ಮಂಗಳವಾರ ಸಂಸತ್ತಿನಲ್ಲಿ ಸಿರಿಧಾನ್ಯ ಆಹಾರ ಉತ್ಸವ (Millets food festival) ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 (International Year of Millets) ಅನ್ನು ಅಂಗೀಕರಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (United Nations General Assembly)ಯು 2021ರ ಮಾರ್ಚ್​ನಲ್ಲಿ ತನ್ನ 75ನೇ ಅಧಿವೇಶನದಲ್ಲಿ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿತು.

ಮಂಗಳವಾರ (ಡಿ.20) ಎಲ್ಲಾ ಪಕ್ಷಗಳ ಸಂಸದರು ಸ್ಥಳೀಯ ಸಿರಿಧಾನ್ಯಗಳಾದ ರಾಗಿ, ಜೋಳ ಮತ್ತು ಸಜ್ಜೆಯಿಂದ ತಯಾರಿಸಿದ ವಿವಿಧ ಖಾದ್ಯಗಳನ್ನು ಸವಿಯಲಿದ್ದಾರೆ. “ಬಾಣಸಿಗರು ಭಾರತೀಯ ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಆರೋಗ್ಯಕರ ಊಟ ಮತ್ತು ಭಕ್ಷ್ಯಗಳನ್ನು ತಯಾರಿಸುತ್ತಾರೆ. ಸಿದ್ಧತೆಗಳ ಮೇಲ್ವಿಚಾರಣೆಯನ್ನು ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೋಡಿಕೊಳ್ಳುತ್ತಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: PM Kisan Status 2022: ಇಂದು ರೈತರ ಬ್ಯಾಂಕ್ ಖಾತೆಗೆ ಬೀಳಲಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ

ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ಕೇಂದ್ರ ಕಚೇರಿ ರೋಮ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಜಾಗತಿಕ ಆಹಾರ ಭದ್ರತೆಯನ್ನು ಹೆಚ್ಚಿಸಲು ಮತ್ತು ಕೃಷಿ ಹವಾಮಾನವನ್ನು ಸ್ಥಿತಿಸ್ಥಾಪಕವಾಗಿಸಲು ಬೆಳೆ ವೈವಿಧ್ಯೀಕರಣ ಮತ್ತು ಸಿರಿಧಾನ್ಯ ಕೃಷಿಗೆ ಕರೆ ನೀಡಿದ್ದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.ಈ ಧಾನ್ಯಗಳ ಆರಂಭಿಕ ಪುರಾವೆಗಳು ಸಿಂಧೂ ನಾಗರಿಕತೆಯಲ್ಲಿ ಕಂಡುಬಂದಿವೆ ಮತ್ತು ಅವು ಆಹಾರಕ್ಕಾಗಿ ಬಳಸಿದ ಮೊದಲ ಸಸ್ಯಗಳಲ್ಲಿ ಒಂದಾಗಿದೆ ಎಂದು ಮೋದಿ ಹೇಳಿದ್ದರು.

ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವರ್ಷವನ್ನು ಆಚರಿಸುವ ಭಾರತದ ಪ್ರಸ್ತಾಪವನ್ನು ಬೆಂಬಲಿಸಿದ್ದಕ್ಕಾಗಿ ಜಾಗತಿಕ ಸಮುದಾಯಕ್ಕೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿಯವರು, “ಸಿರಿಧಾನ್ಯಗಳು ಪೌಷ್ಟಿಕ ಹಾಗೂ ಆರೋಗ್ಯಯುತ ಬೆಳೆಯಾಗಿದ್ದು, ಅರೆ ಶುಷ್ಕ ಪ್ರದೇಶಗಳಲ್ಲಿ ಬೆಳೆಯುವುದರ ಜೊತೆಗೆ ನೀರಾವರಿಗೆ ಕಡಿಮೆ ನೀರನ್ನು ಬಳಸಬಹುದು” ಎಂದಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Tue, 20 December 22